ಬೆಂಗಳೂರು:ಪ್ರೀತಿಯ ನಾಟಕವಾಡಿ ಮದುವೆ ಆಗುವ ಸೋಗಿನಲ್ಲಿ ಅಪ್ರಾಪ್ತೆಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಒಂದನೇ ತ್ವರಿತ ನ್ಯಾಯಾಲಯ ತೀರ್ಪು ನೀಡಿದೆ.
ಎಲೆಕ್ಟ್ರಾನಿಕ್ ಸಿಟಿಯ ವಿ. ಮಧು ಶಿಕ್ಷಾ ಅಪರಾಧಿ. ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ತಮಿಳುನಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು, ಬಾಲಕಿಯನ್ನು ರಕ್ಷಣೆ ಮಾಡಿ ಮಧುನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ತನಿಖೆ ನಡೆಸಿ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಕೆ.ಎನ್. ರೂಪಾ, ಆರೋಪಿ ಮೇಲಿನ ಆರೋಪ ಸಾಬೀತಾಗಿ ಅಪರಾಧಿ ಎಂದು ಘೋಷಣೆ ಮಾಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಜತೆಗೆ 10 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರ್ಕಾರದ ಅಭಿಯೋಜಕರಾಗಿ ಪಿ.ಕೃಷ್ಣವೇಣಿ ವಾದ ಮಂಡಿಸಿದ್ದರು.
ಭೀಕರ ಅಪಘಾತ; ಮಗುಚಿ ಬಿದ್ದ ಲಾರಿ, ಒಬ್ಬ ಸ್ಥಳದಲ್ಲೇ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ..

ಅಡವಿಟ್ಟ ಚಿನ್ನ ಕೊಡಲ್ಲ ಎಂದ ಅಧಿಕಾರಿ; ಬ್ಯಾಂಕ್​ ಎದುರೇ ವಿಷ ಕುಡಿಯಲು ಮುಂದಾದ ರೈತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
