ಕೋಲಾರ:ಮಾಜಿ ಶಾಸಕ ವೈ. ಸಂಪಂಗಿ ಅವರಿಗೆ ಕೊಲೆ ಬೆದರಿಕೆಯೊಡ್ಡಲಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಇನ್ನೊಬ್ಬ ಮಾಜಿ ಶಾಸಕರ ಬೆಂಬಲಿಗರ ವಿರುದ್ಧ ಆರೋಪ ಬಂದಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರನ್ನು ಕೂಡ ನೀಡಲಾಗಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ವೈ, ಸಂಪಂಗಿ, ತಮಗೆ ಕೊಲೆ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಕೆಜಿಎಫ್​ ಎಸ್​ಪಿ ಧರಣಿದೇವಿ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಕೆಜಿಎಫ್ ಕ್ಷೇತ್ರದ ಮಾಜಿ ಶಾಸಕ ಎಸ್. ರಾಜೇಂದ್ರನ್ ಅವರ ಬೆಂಬಲಿಗರಿಂದ ಕೊಲೆ ಬೆದರಿಕೆ ಬಂದಿದ್ದಾಗಿ ಅವರು ತಿಳಿಸಿದ್ದಾರೆ.
ಈ ಇಬ್ಬರೂ ಮಾಜಿ ಶಾಸಕರು ಇತ್ತೀಚೆಗೆ ಅಂಬೇಡ್ಕರ್ ಭವನ ನಿರ್ಮಾಣ ವಿಚಾರವಾಗಿ ಪರ-ವಿರೋಧ ಹೇಳಿಕೆಗಳನ್ನು ನೀಡಿದ್ದರು. ಬಿಜೆಪಿ ಸಂಘಟನೆ, ಆರ್​ಎಸ್​ಎಸ್​​, ವಿಶ್ವ ಹಿಂದು ಪರಿಷತ್, ಬಜರಂಗದಳ ಸೇರಿದಂತೆ ಹಿಂದೂಪರ ಸಂಘಟನೆ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗಿ ಹಾಗೂ ಗೋಹತ್ಯೆ ನಿಷೇಧ ಪ್ರಚಾರ ಮಾಡಿದ್ದಕ್ಕೆ ಪ್ರಾಣ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
ಮಾಜಿ ಶಾಸಕ ಎಸ್. ರಾಜೇಂದ್ರನ್ ಅವರ 8 ಬೆಂಬಲಿಗರ ವಿರುದ್ಧ ಎಸ್​​ಪಿ ಅವರಿಗೆ ದಾಖಲೆ ಸಹಿತ ದೂರು ನೀಡಿದ ಸಂಪಂಗಿ, ನನಗೆ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳವಂತೆ ಒತ್ತಾಯಿಸಿದ್ದಾರೆ.
ಆಸ್ಪತ್ರೇಲಿ ಬಿಸಿನೀರಿಲ್ಲ, ಊಟ ಸರಿ ಇಲ್ಲ ಎಂದು ಹೇಳಿ ವೈದ್ಯಕೀಯ ಪರೀಕ್ಷೆಗೆ ಸಹಕರಿಸದ ನವ್ಯಶ್ರೀ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 7 =
Remember me
