ಚಿತ್ರದುರ್ಗ:ಸ್ವಾಮೀಜಿ ಹಾಗೂ ಶಾಸಕರಿಗೆ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಸ್ವಾಮೀಜಿಗೆ ರಕ್ಷಣೆ ನೀಡಬೇಕು ಎಂದು ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
ಚಿತ್ರದುರ್ಗದ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರಿಗೆ ರಕ್ಷಣೆ ನೀಡಬೇಕು ಎಂದು ಕೋರಿ ಚಿತ್ರದುರ್ಗ ಎಸ್​ಪಿ ಕೆ. ಪರಶುರಾಮ್ ಅವರ ಬಳಿ ಕೇಳಿಕೊಳ್ಳಲಾಗಿದೆ. ಸಿದ್ದರಾಮೇಶ್ವರ ಸ್ವಾಮೀಜಿ ಮಾತ್ರವಲ್ಲದೆ, ಹೊಳಲ್ಕೆರೆ ಶಾಸಕ ಚಂದ್ರಪ್ಪ, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೂ ಕೊಲೆ ಬೆದರಿಕೆಯೊಡ್ಡಲಾಗಿದೆ.
KSP ಆ್ಯಪ್ ಮೂಲಕ ನಮ್ಮ ಕಚೇರಿಗೆ ಕೊಲೆ ಬೆದರಿಕೆ ಬಂದಿದೆ. ಶಾಸಕರು ಹಾಗೂ ಭೋವಿ ಸಮುದಾಯದ ಹಲವರ ಹೆಸರುಗಳು ಪ್ರಸ್ತಾಪ ಆಗಿದ್ದು, ಅವರ ಹತ್ಯೆಗೆ ಸಂಚು ಹೂಡಿದ್ದಾಗಿ ತಿಳಿಸಲಾಗಿದೆ. ನಾಲ್ಕು ಮಂದಿ ಹತ್ಯೆ ಸಂಚು ರೂಪಿಸಿದ್ದಾರೆ, ಅವರ ಹೆಸರು ಕೂಡ ಉಲ್ಲೇಖವಾಗಿದೆ ಎಂಬ ದೂರಿನೊಂದಿಗೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’, ಸದ್ಯ ಇದಕ್ಕೆ ತಡೆ: ಯಾವ್ಯಾವ ಜಿಲ್ಲೆಯಲ್ಲಿಲ್ಲ, ಕಾರಣವೇನು?
ಮಠದ ಆಸ್ತಿಗಳಿಗೆ ಕೆಲವು ದುಷ್ಕರ್ಮಿಗಳಿಂದ ಅಪಾಯವಿದೆ. ಜುಲೈ 18ಕ್ಕೆ ಬೋವಿ ಜನೋತ್ಸವ ನಡೆಯಲಿದೆ. ಆಗಸ್ಟ್​ 1ರಂದು ಸಿದ್ದರಾಮೇಶ್ವರ ರಥೋತ್ಸವ ಬೃಹತ್ ಆಗಿ ನಡೆಯುತ್ತಿದೆ. ಈ ಕಾರಣದಿಂದ ಯಾವುದೇ ತೊಂದರೆ ಆಗದಂತೆ ಸ್ವಾಮೀಜಿಗೆ ರಕ್ಷಣೆ ನೀಡುವಂತೆ ಎಸ್​​ಪಿ ಕಚೇರಿಗೆ ಬೋವಿ ಗುರುಪೀಠದ ಸಿಇಒ ಗೋವಿಂದಪ್ಪ ಪತ್ರ ಬರೆದಿದ್ದಾರೆ.

ಇಷ್ಟಪಟ್ಟು ಪುರುಷನ ಜತೆಗಿದ್ದು, ಸಂಬಂಧ ಕೆಟ್ಟಾಗ ರೇಪ್​ ಆಯ್ತು ಅನ್ನೋ ಹಾಗಿಲ್ಲ: ಸುಪ್ರೀಂ ಕೋರ್ಟ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
