ಬೆಂಗಳೂರು:ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಶುಕ್ರವಾರ (ಫೆ. 16) ಮತದಾನ ನಡೆಯುವ ಹಿನ್ನೆಲೆಯಲ್ಲಿ ಬುಧವಾರ (ಫೆ. 14) ಸಂಜೆ 5 ಗಂಟೆಯಿಂದ ಶನಿವಾರ (ಫೆ. 17) ಬೆಳಗ್ಗೆ 6 ಗಂಟೆವರೆಗೆ ರಾಜಧಾನಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಪಾರದರ್ಶಕವಾಗಿ ಚುನಾವಣೆ ನಡೆಸಲು, ಶಾಂತಿ ಸುವ್ಯವಸ್ಥೆ ಕಾಪಾಡಲು ನಿಟ್ಟಿನಲ್ಲಿ ಮತದಾನ ಅಂತ್ಯಗೊಳ್ಳುವ 48 ಗಂಟೆ ಪೂರ್ವದಲ್ಲಿ ಮತ್ತು ಮತ ಎಣಿಕೆ ದಿನದಂದು ಮದ್ಯ ಮಾರಾಟ ನಿರ್ಬಂಧಿಸಲಾಗಿದೆ ಎಂದು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶ ಹೊರಡಿಸಿದ್ದಾರೆ. ನಿಯಮ ಉಲ್ಲಂಸಿ ಮದ್ಯ ಸಾಗಣೆ, ಮಾರಾಟ ಅಥವಾ ದಾಸ್ತಾನು ಮಾಡಿಕೊಂಡರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸಜ್ಜೆಪಾಳ್ಯ ಜಮೀನು ಒತ್ತುವರಿ ಬಗ್ಗೆ ಸದನದಲ್ಲಿ ಧ್ವನಿಯೆತ್ತಿ: ಮಾಜಿ ಸಿಎಂ ಬೊಮ್ಮಾಯಿಗೆ ಮನವಿಮದ್ಯ ಮಾರಾಟ ನಿಷೇಧಕ್ಕೆ ಬೆಂಗಳೂರು ನಗರ ಜಿಲ್ಲಾ ವರ್ತಕರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಮದ್ಯ ನಿಷೇಧ ಹಿನ್ನೆಲೆಯಲ್ಲಿ ಸರ್ಕಾರದ ಬೊಕ್ಕಸಕ್ಕೆ ಅಂದಾಜು 250 ಕೋಟಿ ರೂ. ಆದಾಯ ನಷ್ಟವಾಗಲಿದೆ. ಪ್ರೇಮಿಗಳ ದಿನದಂದು ಮದ್ಯ ಮಾರಾಟ ಹೆಚ್ಚಿರುತ್ತದೆ. ಕೇವಲ 16 ಸಾವಿರ ಮಂದಿ ಮಾತ್ರ ಮತ ಚಲಾಯಿಸುತ್ತಾರೆ. ಅವರೆಲ್ಲರೂ ವಿದ್ಯಾವಂತರು. ಹೀಗಾಗಿ, ಚುನಾವಣಾ ಆಯೋಗ ಇದನ್ನು ಮರು ಪರಿಶೀಲಿಸಬೇಕೆಂದು ಕೋರಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
