ಬೆಂಗಳೂರು:ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು-ನಾಲ್ಕು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ಕುರಿತು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪ್ರತ್ಯೇಕವಾಗಿ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ರಾಜ್ಯಾದ್ಯಂತ ಬಾರ್ ಗಳು ಬಂದ್ ಆಗಿರಲಿದ್ದು, ಇಂದು ಸಂಜೆ 5 ಗಂಟೆಯಿಂದ ಮೇ 11ರ ಬೆಳಿಗ್ಗೆ 6ರವೆಗೆ ಎಲ್ಲಿಯೂ ಮದ್ಯ ಸಿಗುವುದಿಲ್ಲ.
ಚುನಾವಣಾ ಫಲಿತಾಂಶದ ದಿನವಾದ ಮೇ 13ರ ಬೆಳಿಗ್ಗೆ 6 ಗಂಟೆಯಿಂದ ಮೇ 14ರ ಬೆಳಿಗ್ಗೆ 6ರವರೆಗೆ ಬಾರ್​ಗಳು ಬಂದ್ ಇರಲಿವೆ. ಈ ದಿನಗಳಂದು ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ರಾಜ್ಯ ಸರ್ಕಾರಕ್ಕೆ ಆಯೋಗವು ಸೂಚನೆಯನ್ನು ನೀಡಿದೆ.
ಇದನ್ನೂ ಓದಿ:ಭೀಕರ ಬೋಟ್​ ದುರಂತಕ್ಕೆ ಹಲವು ಮಕ್ಕಳು ಸೇರಿದಂತೆ 21ಕ್ಕೂ ಹೆಚ್ಚು ಬಲಿ
ಮತದಾನದ ದಿನ ಮತ್ತು ಮತ ಎಣಿಕೆ ದಿನಗಳನ್ನು ಶುಷ್ಕ ದಿನ ಎಂದು ಘೋಷಿಸಲಾಗಿದ್ದು, ಈ ದಿನದಂದು ಮದ್ಯ ತಯಾರಿಕೆ, ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮದ್ಯದಂಗಡಿಗಳಲ್ಲಿ ಭರ್ಜರಿ ವ್ಯಾಪಾರ ವಹಿವಾಟು ನಡೆಯುವ ಸಾಧ್ಯತೆಯಿದ್ದು, ಎಲ್ಲೆಡೆ ಭಾರಿ ಬೇಡಿಕೆ ಎದುರಾಗಿದೆ. ಅಲ್ಲಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆ ಪಡೆದು ಮದ್ಯವನ್ನು ಮಾರಾಟ ಮಾಡಲಾಗುತ್ತಿದೆ.
ಈಗಾಗಲೇ ಹಲವರು ಕೊಟ್ಯಂತರ ರೂಪಾಯಿಯ ಮದ್ಯವನ್ನು ಖರೀದಿಸಿ ಸಂಗ್ರಹಿಸಿಟ್ಟಿದ್ದು, ಈ ದಿನಗಳಂದು ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲು ಯೋಜಿಸಿದ್ದಾರೆ. ಜತೆಗೆ ಮತದಾರರಿಗೆ ಆಮಿಷವೊಡ್ಡಲು ಹಲವು ರಾಜಕೀಯ ನಾಯಕರು ಈಗಾಗಲೇ ಮದ್ಯ ಸಂಗ್ರಹಿಸಿಟ್ಟಿದ್ದಾರೆ ಎನ್ನುವ ಆರೋಪಗಳಿವೆ.(ಏಜೆನ್ಸೀಸ್​)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 9 =
Remember me
