ಮೈಸೂರು:ರೌಡಿಶೀಟರ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣೆಯ ಸಬ್​ಇನ್ಸ್​ಪೆಕ್ಟರ್​ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕರ್ತವ್ಯ ಲೋಪದಡಿಯಲ್ಲಿ ಪಿಎಸ್​ಐ ಲೋಕೇಶ್​ರನ್ನು ಅಮಾನತು ಮಾಡಲಾಗಿದೆ. ಈಚೆಗೆ ಕುಶಾಲನಗರದ ಹಾರಂಗಿ ಜಲಾಶಯದ ಅತಿಥಿಗೃಹದಲ್ಲಿ ರೌಡಿಶೀಟರ್​ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ, ಜತೆಗೆ ಪೋಟೋ ಕೂಡ ತೆಗೆಸಿಕೊಂಡಿದ್ದರು. ಈ ಬಗ್ಗೆ ಅಣ್ಣಯ್ಯ ಎಂಬುವವರು ದೂರು ನೀಡಿದ್ದರು.
ಇದನ್ನೂ ಓದಿ:ಆಹಾರವೆಂದು ಸಿಡಿಮದ್ದು ತಿಂದ ಗರ್ಭಿಣಿ ಎಮ್ಮೆ ಬಾಯಿ ಛಿದ್ರ: ಮಾನವನ ಎಡವಟ್ಟಿಗೆ ಮೂಕ ಪ್ರಾಣಿಗೇಕೆ ಶಿಕ್ಷೆ?
ದೂರಿನ ಆಧಾರದ ಮೇಲೆ ತನಿಖೆ ನಡೆಸಿ ಲೋಕೇಶ್ ಅವರನ್ನು ಮಂಗಳವಾರ ಕರ್ತವ್ಯದಿಂದ ಅಮಾನತುಗೊಳಿಸಿರುವುದಾಗಿ ಎಸ್‌ಪಿ ರಿಷ್ಯಂತ್ ಆದೇಶಿಸಿದ್ದಾರೆ. ಇಲಾಖೆ ಅನುಮತಿ ಇಲ್ಲದೆ ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಪ್ರದೇಶವನ್ನು ಬಿಟ್ಟು ಬೇರೆ ಜಿಲ್ಲೆಗೆ ತೆರಳಿದ ಕಾರಣಕ್ಕೆ ಅಮಾನತುಗೊಳಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:PHOTOS: ಕಾಂಗೋ ಗೊರಿಲ್ಲಾಗಳ 12 ರಕ್ಷಕರನ್ನೇ ಕೊಂದು ಹಾಕಿದ್ರು ಬಂಡುಕೋರರು!
ರೌಡಿಶೀಟರ್ ಜತೆ ಜಬರ್ದಸ್ತ್ ಎಣ್ಣೆ ಪಾರ್ಟಿ ಮಾಡಿದ ಸಬ್ ಇನ್ಸ್‌ಪೆಕ್ಟರ್!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten − three =
Remember me
