ಮೈಸೂರು/ಬೆಳಗಾವಿ/ಬಾಗಲಕೋಟೆ:ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲೂಕಿನಲ್ಲಿ ಡೋಲಿನಲ್ಲಿ ಮದ್ಯದ ಬಾಟಲಿಗಳನ್ನು ತುಂಬಿ ಸಾಗಣೆ ಮಾಡುತ್ತಿದ್ದ ಎನ್.ಬೆಳ್ತೂರು ನಿವಾಸಿಗಳಾದ ಚೆಲá-ವರಾಜು, ಮಂಜು ಎಂಬುವರನ್ನು ಬಂಧಿಸಲಾಗಿದೆ. ಇವರು ಆನೆ ಮಾಳದಿಂದ ಎನ್.ಬೆಳ್ತೂರಿಗೆ ಮದ್ಯ ಸಾಗಣೆ ಮಾಡá-ತ್ತಿದ್ದರು. ಉದ್ಬೂರು ಚೆಕ್​ಪೋಸ್ಟ್ ಬಳಿ ಆರೋಪಿಗಳನ್ನು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ ಸಂದರ್ಭ ಡೋಲಿನಲ್ಲಿ ಮದ್ಯ ತುಂಬಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಗಳು 20 ದಿನಗಳಿಂದ ಡೋಲಿನಲ್ಲಿ ಮದ್ಯ ತುಂಬಿ ಸಾಗಣೆ ಮಾಡುತ್ತಿದ್ದರು ಎನ್ನಲಾಗಿದೆ.
ಬೆಳಗಾವಿಯಲ್ಲಿ ಐವರ ಬಂಧನ: ಗೋವಾ ರಾಜ್ಯದಿಂದ ಅಕ್ರಮವಾಗಿ ಬಟ್ಟಿ ಮದ್ಯವನ್ನು ಹಾಲಿನ ಟ್ಯಾಂಕರ್​ನಲ್ಲಿ ಸಾಗಿಸುತ್ತಿದ್ದ ಇಬ್ಬರನ್ನು ಖಾನಾಪುರ ಪೊಲೀಸರು ಬಂಧಿಸಿದ್ದಾರೆ. ಜತೆಗೆ ಅಕ್ರಮವಾಗಿ ಕಳ್ಳಬಟ್ಟಿ ಮದ್ಯ ತಯಾರಿಸಿ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ.
ಮದ್ಯ ಮಾರಾಟ ಮಾಡಿ: ರಾಜ್ಯದಲ್ಲಿ ಕರೊನಾ ಮಹಾಮಾರಿಗಿಂತ ಮದ್ಯ ಸಿಗದೆ ಮೃತಪಟ್ಟಿರುವ ಸಂಖ್ಯೆ ಜಾಸ್ತಿ ಇದೆ. ಮದ್ಯ ಸೇವಿಸá-ವವರ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು. ಅವರದೂ ಜೀವ ಅಲ್ಲವೆ? ಎಂದು ಮಾಜಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಬಾಗಲಕೋಟೆಯಲ್ಲಿ ಆಗ್ರಹಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ಎಂಎಸ್​ಐಎಲ್ ಮದ್ಯದಂಗಡಿ ಗಳನ್ನು ತೆರೆಯಲು ಸರ್ಕಾರಕ್ಕೆ ಯಾವುದೇ ರೀತಿ ಪ್ರಸ್ತಾವನೆ ಸಲ್ಲಿಸಿಲ್ಲ. ಇನ್ನೆರೆಡು ದಿನಗಳಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ನಾವು ಮುಂದಿನ ಕ್ರಮಕೈಗೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಮದ್ಯವ್ಯಸನಿಗಳು ಆತ್ಮಹತ್ಯೆ ಹಾದಿ ತುಳಿಯಬಾರದು.| ಎಚ್.ನಾಗೇಶ್ ಅಬಕಾರಿ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
