ಬೆಂಗಳೂರು:ಪ್ರೇಮಿಗಳ ದಿನ ಆಚರಣೆ ಸಲೆಬ್ರೆಟ್​​ ಮಾಡಲು ಯುವಕ, ಯುವತಿಯರು ಸಿದ್ಧರಾಗಿದ್ದಾರೆ.  ಫೆಬ್ರವರಿ 14 ಪ್ರೇಮಿಗಳ ದಿನ ಅಂದು ಪ್ರೇಮಿಗಳು ಪಾರ್ಟಿ ಮೂಡಿನಲ್ಲಿ ಇರುತ್ತಾರೆ. ಅದ್ದೂರಿಯಾಗಿ ಮೊಜು, ಮಸ್ತಿಯಿಂದ ಪ್ರೇಮಿಗಳ ದಿನ ಆಚರಣೆ ಮಾಡಬೇಕು ಎಂದು ಪ್ಲ್ಯಾನ್​ ಹಾಕಿಕೊಂಡಿರು ಬೆಂಗಳೂರಿನ ಪ್ರೇಮಿಗಳಿಗೆ ಒಂದು ಶಾಕಿಂಗ್​ ಸುದ್ದಿ ಇದೆ.
ಪ್ರೇಮಿಗಳ ದಿನಾಚರಣೆಯಂದು ಮದ್ಯಪ್ರಿಯ ಪ್ರೇಮಿಗಳಿಗೆ ನಿರಾಶೆ ಕಾದಿದೆ. ಹೌದು ಫೆಬ್ರವರಿ 14ರ ಸಂಜೆ 5ರಿಂದ ಫೆಬ್ರವರಿ 17ರ ಬೆಳಿಗ್ಗೆ 6 ಗಂಟೆವರೆಗೆ ನಗರದ ಕೆಲವು ಭಾಗಗಳಲ್ಲಿ (ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಪ್ರದೇಶಗಳನ್ನು ಹೊರತುಪಡಿಸಿ) ಉಳಿದ ಕಡೆ ಮದ್ಯ  ಮಾರಾಟವನ್ನು ನಿಷೇಧಿಸಲಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆಬ್ರವರಿ 16 ರಂದು ವಿಧಾನ ಪರಿಷತ್ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ವ್ಯಾಲೆಂಟೈನ್ಸ್ ಡೇ ಅನ್ನು ದೇಶಾದ್ಯಂತ ವಿಶೇಷವಾಗಿ ಬೆಂಗಳೂರಿನಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲು ಯುವ ಜನತೆ ಸಿದ್ದರಾಗಿದ್ದರು. ರೆಸ್ಟೋರೆಂಟ್‌ಗಳು, ಪಬ್‌ಗಳು ಮತ್ತು ಬಾರ್‌ಗಳಲ್ಲಿ ವಿಶೇಷ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ, ಪ್ರೇಮಿಗಳ ದಿನದಂದೇ ಮದ್ಯ ಮಾರಾಟ ನಿಷೇಧಿಸಿದ್ದು, ಮದ್ಯ ಪ್ರಿಯ ಪ್ರೇಮಿಗಳಿಗೆ ನಿರಾಸೆ ಮೂಡಿಸಿದೆ.
ವರದಿಗಳ ಪ್ರಕಾರ, ಬೆಂಗಳೂರು ನಗರ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಶಿಕ್ಷಕರು (ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಮತ್ತು ಆನೇಕಲ್) ಶಿಕ್ಷಕರು ಮತದಾನ ಮಾಡಲಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫೆ.23ರವರೆಗೆ ಮುಂದುವರಿಯಲಿದೆ.
1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 135(ಸಿ) ಅಡಿಯಲ್ಲಿ ಮತ್ತು ಕರ್ನಾಟಕ ಅಬಕಾರಿ ನಿಯಮ 1967ರ 10 (ಬಿ)ಯನ್ನು ಪರಿಗಣನೆಗೆ ತೆಗೆದುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಉಪ ಆಯುಕ್ತ ಕೆ.ಎ.ದಯಾನಂದ ಅವರು ನಿಷೇಧವನ್ನು ಘೋಷಿಸಿದ್ದು, ತಿಳಿಸಿದ್ದಾರೆ.
ಈ ಊರಲ್ಲಿ ಹೆಂಗಸರು ಬಟ್ಟೆಯನ್ನೇ ಹಾಕುವುದಿಲ್ಲ!; ನೀವು ಈ ಊರಿಗೆ ಹೋದ್ರು ಬಟ್ಟೆ ಇಲ್ಲದೆನೆ ಬದುಕಬೇಕು..

ಗೋಬಿ ಮಂಚೂರಿಯನ್ ನಿಷೇಧ, ಇನ್ಮುಂದೆ ಮಾರಾಟ ಮಾಡಿದ್ರೆ ಲೈಸೆನ್ಸ್ ಕ್ಯಾನ್ಸಲ್​

ಹೊಸದಾಗಿ ಮದುವೆಯಾಗುವ ಜೋಡಿಗಳಿಗೆ ಸಾನಿಯಾ ಮಿರ್ಜಾ ಕೊಟ್ಟ ಟಿಪ್ಸ್​ ಏನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 2 =
Remember me
