ಚಿಕ್ಕಬಳ್ಳಾಪುರ: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು 21 ನೇ ಜಾನುವಾರು ಗಣತಿ ಕಾರ್ಯಕ್ರಮವನ್ನು ಸೆ.1 ರಿಂದ ಕೈಗೊಂಡಿದೆ.ಹಿಂದೆ ಪುಸ್ತಕದಲ್ಲಿ ಗಣತಿ ಮಾಹಿತಿ ನಮೂದಿಸುತ್ತಿದ್ದ ಗಣತಿಕಾರರು, ಈ ಬಾರಿ ಮೊದಲ ಬಾರಿಗೆ ಸ್ಮಾರ್ಟ್ ಫೋನ್ ಬಳಸಿ ಸರ್ವೆ ಕೈಗೊಳ್ಳಲಿದ್ದು ಮನೆ ಮನೆಗೆ ತೆರಳಿ, ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. 1919 ರಿಂದಲೂ ಜಾನುವಾರು ಗಣತಿ ಪ್ರಕ್ರಿಯೆ ನಿಗದಿತ ಅವಧಿಯಲ್ಲಿ ನಡೆಯುತ್ತಿದ್ದು ಕಳೆದ 100 ವರ್ಷಗಳಲ್ಲಿ 20 ಗಣತಿ ನಡೆದಿದೆ. 2024 ರಲ್ಲಿ 21 ನೇ ಗಣತಿ ಪ್ರಕ್ರಿಯೆ ನಡೆಯುತ್ತಿದೆ. ಸರ್ಕಾರವು ಮುಂದಿನ ವರ್ಷಗಳಲ್ಲಿ ವಿಶೇಷ ಯೋಜನೆಯನ್ನು ಸಿದ್ಧಪಡಿಸಲು ಅಗತ್ಯವಿರುವ ಅಂಶಗಳನ್ನು ತಿಳಿದುಕೊಳ್ಳುವುದೇ ಸರ್ವೆ ಮುಖ್ಯ ಉದ್ದೇಶ. ಇದರ ಆಧಾರದಲ್ಲಿಯೇ ರೈತರು ಹಾಗೂ ಹೈನುಗಾರಿಕೆ ಕ್ಷೇತ್ರಗಳಿಗೆ ಬೇಕಾದ ನೀತಿ ನಿಯಮಗಳು ರೂಪುಗೊಳ್ಳಲಿವೆ.
*ಗಣತಿಗೆ ವಿಶೇಷ ಆ್ಯಪ್ಕೇಂದ್ರ ಪಶುಸಂಗೋಪನಾ ಇಲಾಖೆಯಿಂದಲೇ ಎನ್ನುವ ಪ್ರತ್ಯೇಕ ಆ್ಯಪ್ ಅಭಿವೃದ್ಧಿಪಡಿಸಲಾಗಿದ್ದು ಇದರ ಬಗ್ಗೆ ಸಿಬ್ಬಂದಿಗೆ ತರಬೇತಿಯನ್ನೂ ಸಹ ನೀಡಲಾಗಿದೆ. ಮೊದಲು ಪುಸ್ತಕದಲ್ಲಿ 200 ಕಾಲಂಗಳನ್ನು ಭರ್ತಿ ಮಾಡಬೇಕಾಗಿತ್ತು. ಈ ಬಾರಿ ಸರ್ವೆ ಚುಟುಕಾಗಿರುತ್ತದೆ. ನೆಟ್ ವರ್ಕ್ ಇಲ್ಲದಿದ್ದರೂ ತಂತ್ರಾಂಶವು ಕಾರ್ಯ ನಿರ್ವಹಿಸುತ್ತದೆ.
*4 ತಿಂಗಳ ಸರ್ವೆ ಕಾರ್ಯರಾಜ್ಯದಲ್ಲಿ ಪಶುಸಂಗೋಪನಾ ಇಲಾಖೆಯಿಂದ 4 ತಿಂಗಳು ಬೃಹತ್ ಸಮೀಕ್ಷಾ ಕಾರ್ಯ ನಡೆಯಲಿದ್ದು ಮಾಸ್ಟರ್ ಟ್ರೇನರ್ ಗಳ ತರಬೇತಿ ಪೂರ್ಣಗೊಂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − one =
Remember me
