ಬೆಂಗಳೂರು:ತುರ್ತು ಕರೆಗೆ ಸ್ಪಂದಿಸಿ ಜಾನುವಾರುಗಳ ಆರೋಗ್ಯ ರಕ್ಷಣೆ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ಒದಗಿಸುವ ವ್ಯವಸ್ಥೆಯನ್ನು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ವಿಧಾನಸೌಧದ ಮುಂದೆ ’ಪಶು ಸಂಜೀವಿನಿ’ ಸುಸಜ್ಜಿತ ಶಸ್ತ್ರಚಿಕಿತ್ಸಾ ವಾಹನಗಳಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಮೊದಲ ಹಂತವಾಗಿ 15 ಜಿಲ್ಲೆಗಳಲ್ಲಿ ಪಶು ಚಿಕಿತ್ಸಾ ಆಂಬುಲೆನ್ಸ್ ಕಾರ್ಯಾರಂಭಿಸಲಿವೆ. ನಂತರ ರಾಜ್ಯದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದರು. ಕೃಷಿಕರ ಜೀವನದ ಅವಿಭಾಜ್ಯ ಅಂಗವಾಗಿರುವ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಕಟಿಬದ್ಧವಾಗಿದ್ದು, ‘ಪಶು ಸಂಜೀವಿನಿ’ ಸೇವೆಗಳನ್ನು ಇಲಾಖೆಯ ಸಹಾಯವಾಣಿ ಸೇವೆಗಳಿಗೆ ಜೋಡಿಸಿ 247 ಜಾನುವಾರುಗಳ ರಕ್ಷಣೆಗೆ ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಸಕ್ತ ಸಾಲಿನ ಬಜೆಟ್​ನಲ್ಲಿ ಘೊಷಿಸಿದ 2 ಕೋಟಿ ರೂ. ಹಾಗೂ ಇಲಾಖೆಯ ಇತರ ಅನುದಾನದಲ್ಲಿ ಅನುಷ್ಠಾನಗೊಳಿಸುತ್ತಿದ್ದು, ರೈತರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಿಎಂ ಮನವಿ ಮಾಡಿದರು.
ಕಾರ್ಯಾಚರಿಸುವ ಜಿಲ್ಲೆಗಳು
ರಾಯಚೂರು, ಕಲಬುರಗಿ, ಧಾರವಾಡ, ವಿಜಯಪುರ, ಬೆಳಗಾವಿ, ಮಂಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಚಿತ್ರದುರ್ಗ, ಯಾದಗಿರಿ, ಬೀದರ್, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳ ಪಶು ವೈದ್ಯಕೀಯ ಪಾಲಿ ಕ್ಲಿನಿಕ್​ಗಳಿಗೆ ಈ ವಾಹನಗಳನ್ನು ನೀಡಲಾಗುತ್ತಿದೆ.
ಚಿಕಿತ್ಸೆಗಳ ಲಭ್ಯತೆ
ವಿಶೇಷತೆ
ಗೋ ಹತ್ಯೆ ನಿಷೇಧ ಜಾರಿಗೆ ಬದ್ಧ
ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವುದಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಪಶು ಸಂಗೋಪನೆ ಹಾಗೂ ಪಶು ವೈದ್ಯಕೀಯ ಸಚಿವ ಪ್ರಭು ಚವ್ಹಾಣ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಉತ್ತರಪ್ರದೇಶ ಸೇರಿ ವಿವಿಧ ರಾಜ್ಯಗಳ ಕಾಯ್ದೆಗಳನ್ನು ಅಧ್ಯಯನ ಮಾಡಲಾಗಿದ್ದು, ವಿಧಾನ ಮಂಡಲದ ಮುಂಬರುವ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡಿಸುವ ಚಿಂತನೆಯಿದೆ ಎಂದರು. ಜನರಿಗೆ ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಆಶ್ವಾಸನೆಯನ್ನು ಮರೆತಿಲ್ಲ. 2012ರಲ್ಲಿ ಈ ಕುರಿತು ಮಸೂದೆಯನ್ನು ಪಾಸು ಮಾಡಲಾಗಿತ್ತು. ಆದರೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ತಾಂತ್ರಿಕ ಕಾರಣವೊಡ್ಡಿ ತಿರಸ್ಕರಿಸಿತ್ತು ಎಂದು ನೆನಪಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + nine =
Remember me
