ಬೆಂಗಳೂರು:ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಶಿಕ್ಷಣ, ಸಾಂಕ್ರಾಮಿಕ ರೋಗ ಕಾಯ್ದೆ ಉಲ್ಲಂಘಿಸುವವರಿಗೆ ನಷ್ಟದ ದುಪ್ಪಟ್ಟು ದಂಡ ವಿಧಿಸುವುದು, ಪದವಿ, ಇಂಜಿನಿಯರಿಂಗ್ ಹಾಗೂ ಡಿಪ್ಲೊಮಾ ಕಾಲೇಜುಗಳಲ್ಲಿ ಡಿಜಿಟಲ್ ಕಲಿಕೆಗೆ ಒತ್ತು. ಇವು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ತೆಗೆದುಕೊಂಡು ಪ್ರಮುಖ ನಿರ್ಣಯಗಳು.
ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ವನಿಸಲಾಯಿತು. ಆದರೆ, ಮೊದಲ ಹಂತದಲ್ಲಿ ಪ್ರಸಕ್ತ ವರ್ಷದಿಂದ 276 ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಶಿಕ್ಷಣ ನೀಡಲು ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಪಬ್ಲಿಕ್ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಎಲ್​ಕೆಜಿ, ಯುಕೆಜಿ ಪ್ರಾರಂಭಿಸಲು ಬೇಕಾದ ಮೂಲಸೌಕರ್ಯ ಒದಗಿಸಲು ನಿರ್ಧರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಶಿಕ್ಷಣ ನೀಡುವ ಬಗ್ಗೆಯೂ ಗಂಭೀರ ಚಿಂತನೆ ನಡೆಸಲಾಗಿದೆ. ಪಬ್ಲಿಕ್ ಶಾಲೆಗಳಲ್ಲಿ ಆರಂಭಿಸುವ ಎಲ್​ಕೆಜಿ, ಯುಕೆಜಿ ಶಿಕ್ಷಕರಿಗೆ 7,500 ರೂ., ಸಹಾಯಕಿಯರಿಗೆ 5 ಸಾವಿರ ರೂ. ಗೌರವ ಸಂಭಾವನೆ ನೀಡಲು ನಿರ್ಧರಿಸಲಾಗಿದೆ ಎಂದರು.
ಡಿಜಿಟಲ್ ಕಲಿಕೆ:ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಜಿಟಲ್ ತರಬೇತಿ ಕೋರ್ಸ್ ಆರಂಭಿಸಲು ಸಂಪುಟಸಭೆಯಲ್ಲಿ ತೀರ್ವನಿಸಲಾಗಿದೆ. ರಾಜ್ಯದಲ್ಲಿ 430 ಪ್ರಥಮ ದರ್ಜೆ ಕಾಲೇಜು, 87 ಪಾಲಿಟೆಕ್ನಿಕ್ ಮತ್ತು 40 ಇಂಜಿನಿಯರಿಂಗ್ ಕಾಲೇಜುಗಳಿವೆ. ಈ ಕಾಲೇಜು ವಿದ್ಯಾರ್ಥಿಗಳ ಡಿಜಿಟಲ್ ಕಲಿಕೆಗೆ 35 ಕೋಟಿ ರೂ. ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಅರಕೇರಾ ಹೊಸ ತಾಲೂಕು:ಅರಕೇರಾ ಗ್ರಾಮ ಪಂಚಾಯಿತಿಯನ್ನು ತಾಲೂಕು ಕೇಂದ್ರವಾಗಿ ಮೇಲ್ದರ್ಜೆಗೇರಿಸಲು ಸಂಪುಟಸಭೆ ಅನುಮೋದನೆ ನೀಡಿದೆ. ದೇವದುರ್ಗ ಕ್ಷೇತ್ರದ ಶಾಸಕ ಶಿವನಗೌಡ ನಾಯಕ ಅರಕೇರಾ ಗ್ರಾ.ಪಂ.ಅನ್ನು ತಾಲೂಕು ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಲು ಸರ್ಕಾರದ ಮೇಲೆ ಸಾಕಷ್ಟು ಒತ್ತಡ ತಂದಿದ್ದರು. ಹಾಗೆಯೇ ಸೊರಬ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ. ಅದೇ ರೀತಿ ಮುಧೋಳ ತಾಲೂಕು ಲೋಕಾಪುರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸಹಮತ ನೀಡಲಾಗಿದೆ.
21 ತಾಲೂಕಿನ ಜಲಾನಯನಕ್ಕೆ 600 ಕೋಟಿ ರೂ. ಯೋಜನೆ: ರಾಜ್ಯದ ಜಲಾನಯನ ಕ್ಷೇತ್ರಕ್ಕೆ 600 ಕೋಟಿ ರೂ. ವೆಚ್ಚದ ಯೋಜನೆ ಸಿದ್ಧಪಡಿಸಿದ್ದು, ಸಂಪುಟ ಒಪ್ಪಿಗೆ ನೀಡಿದೆ. 2026-27ರ ಒಳಗೆ 20 ಜಿಲ್ಲೆಗಳಲ್ಲಿ 10 ಲಕ್ಷ ಹೆಕ್ಟೇರ್​ನಲ್ಲಿ ವಿವಿಧ ರೀತಿಯ ಜಲಾನಯನ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಮಾಡಲು 420 ಕೋಟಿ ರೂ. ವಿಶ್ವಬ್ಯಾಂಕ್ ನೆರವು ಪಡೆಯಲಾಗುತ್ತದೆ. ಬರಡು ಭೂಮಿಯಲ್ಲಿ ಅಂತರ್ಜಲವೃದ್ಧಿಗೂ ಗಮನ ಕೊಡಲಾಗುತ್ತದೆ ಎಂದು ಮಾಧುಸ್ವಾಮಿ ತಿಳಿಸಿದರು. ಬಾಗೇಪಲ್ಲಿ, ಚಳ್ಳಕೆರೆ, ಶಿಕಾರಿಪುರ, ಗುಂಡ್ಲುಪೇಟೆ, ಶಿರಾ, ಅರಸೀಕೆರೆ, ಕಡೂರು, ಬೈಲಹೊಂಗಲ, ಹಿರೇಕೆರೂರು, ಹುನಗುಂದ, ಕುಂದಗೋಳ, ಬಸವನಬಾಗೇವಾಡಿ, ರೋಣ, ಬಸವ ಕಲ್ಯಾಣ, ಮಸ್ಕಿ, ಯಲಬುರ್ಗ, ಶಹಾಪುರ ಸೇರಿ 21 ತಾಲೂಕು ಈ ಯೋಜನೆ ವ್ಯಾಪ್ತಿಗೆ ಬರಲಿದೆ.
ಜೋಗ ಅಭಿವೃದ್ಧಿಗೆ 120 ಕೋಟಿ ರೂ.
ಸಚಿವರು ಜಿಲ್ಲಾ ಪ್ರವಾಸ ಮಾಡಿ
ಉಸ್ತುವಾರಿ ಸಚಿವರು ತಂತಮ್ಮ ಜಿಲ್ಲೆಗಳಲ್ಲಿ ತಕ್ಷಣ ಪ್ರವಾಸ ಕೈಗೊಂಡು ಜನರ ಬೇಕು- ಬೇಡಗಳಿಗೆ ಸ್ಪಂದಿಸುವಂತೆ ಸಿಎಂ ಯಡಿಯೂರಪ್ಪ ಸಚಿವರಿಗೆ ಸೂಚಿಸಿದ್ದಾರೆ. ಮಳೆ ಅನಾಹುತಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ಥರ ನೆರವಿಗೆ ಧಾವಿಸಬೇಕು. ಸಮಸ್ಯೆಗಳ ಪಟ್ಟಿ ಸಿದ್ಧಪಡಿಸಿಕೊಳ್ಳಿ ಎಂದು ಸಂಪುಟ ಸಭೆಯಲ್ಲಿ ಸಲಹೆ ಮಾಡಿದ್ದಾರೆ ಎನ್ನಲಾಗಿದೆ. ಅಧಿವೇಶನದಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಹಣಿಯಲು ಸಿದ್ಧವಾಗುತ್ತಿವೆ. ಕರೊನಾ ವಿಚಾರದಲ್ಲಿ ಸಂಬಂಧಿಸಿತ ಸಚಿವರು ಸೂಕ್ತ ದಾಖಲೆ ಸಿದ್ಧಮಾಡಿಟ್ಟುಕೊಳ್ಳಿ ಎಂದು ತಿಳಿಸಿದ್ದಾರೆನ್ನಲಾಗಿದೆ. ಡ್ರಗ್ಸ್ ವಿಚಾರದಲ್ಲಿ ಹೇಳಿಕೆ ನೀಡುವಾಗ ಸಚಿವರು ತುಂಬಾ ಎಚ್ಚರಿಕೆ ಹೆಜ್ಜೆ ಇಡಬೇಕು ಎಂದು ಸಿಎಂ ಹೇಳಿದರೆಂದು ಮೂಲಗಳು ತಿಳಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − two =
Remember me
