ಗದಗ ಜಿಲ್ಲೆಯ 9 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 47 ಲೋಡರ್ಸ್​ ಮತ್ತು 11 ಕ್ಲೀನರ್ಸ್​ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನ.28ರೊಳಗೆ ಸಲ್ಲಿಸಬೇಕು. ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ.
ಹುದ್ದೆಗಳ ವಿವರಗದಗ-ಬೆಟಗೇರಿ ನಗರಸಭೆ- 1ಗಜೇಂದ್ರಗಡ ಪುರಸಭೆ- 10ಲಕ್ಷ್ಮೇಶ್ವರ ಪುರಸಭೆ- 9ಮುಂಡರಗಿ ಪುರಸಭೆ- 10ನಗರಗುಂದ ಪುರಸಭೆ- 10ರೋಣ ಪುರಸಭೆ- 10ಮುಳಗುಂದ ಪಟ್ಟಣ ಪಂಚಾಯಿತಿ- 4ನರೇಗಲ್ಲ ಪಟ್ಟಣ ಪಂಚಾಯಿತಿ- 1ಶಿರಹಟ್ಟಿ ಪಟ್ಟಣ ಪಂಚಾಯಿತಿ- 3
ಅರ್ಹತಾ ಮಾನದಂಡ:ಯಾವುದೇ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು. ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್​/ ಕ್ಲೀನರ್​ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ/ ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ ಕಾರ್ಯದಡಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಈ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ(11/02/2022) ಕನಿಷ್ಠ 2 ವರ್ಷ ಸೇವೆಯಲ್ಲಿ ಮುಂದುವರಿದಿರುವ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಸ್ವಚ್ಛತಾ ಕಾರ್ಯಗಳಿಗೆ ಸಂಬಂಧಿಸಿದ ಹುದ್ದೆಗಳಾಗಿದ್ದು, ದೈಹಿಕ ಶ್ರಮದ ಅಗತ್ಯವಿದೆ.
ಅರ್ಜಿ ಶುಲ್ಕ:ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು (ಡಿಡಿಯನ್ನು ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿ ಕಾರ್ಯಾಲಯ, ಗದಗ ಇವರ ಹೆಸರಿಗೆ ತೆಗೆಯುವುದು) ಶುಲ್ಕ ಸಲ್ಲಿಸದಿರುವ ಅರ್ಜಿ ಹಾಗೂ ಅರ್ಜಿಯಲ್ಲಿ ನಮೂದಿಸಿದ ಪೂರ್ಣ ದಾಖಲೆ ಸಲ್ಲಿಸದೇ ಇರುವ ಅರ್ಜಿ ಪರಿಗಣಿಸಲಾಗುವುದಿಲ್ಲ. ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ- 1 ಮತ್ತು ಮಹಿಳಾ ಅಭ್ಯರ್ಥಿಗಳಿಗೆ 100 ರೂ., ಸಾಮಾನ್ಯ ವರ್ಗ 2ಎ, 2ಬಿ, 3ಎ, 3ಬಿ, ವರ್ಗದ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಇರುತ್ತದೆ.
ವಯೋಮಿತಿ:ಅರ್ಜಿ ಸಲ್ಲಿಸಲು ಕೊನೇ ದಿನಾಂಕದಂದು 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ ವಯೋಮಿತಿ 55 ವರ್ಷ ಇರಬೇಕು.
ಅಭ್ಯರ್ಥಿಗಳಿಗೆ ಸೂಚನೆಗಳು-ಅರ್ಜಿಗಳನ್ನು ಆಯಾ ನಗರಸಭೆ/ಪುರಸಭೆ/ ಪಟ್ಟಣ ಪಂಚಾಯಿತಿಗಳಿಗೆ ನೇರವಾಗಿ ಸಲ್ಲಿಸಿ ಸ್ವೀಕೃತಿ ಪಡೆಯತಕ್ಕದ್ದು, ಅಂಚೆ ಮೂಲಕ ಅಥವಾ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.-ಕೊನೆಯ ದಿನಾಂಕದ ನಂತರ ಹಾಕಿದ ಮತ್ತು ಅಪೂರ್ಣವಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.-ಮೀಸಲಾತಿಯಡಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರದ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು (ಅಧ್ಯಕ್ಷರು, ಜಾತಿ ಆದಾಯ ಪರಿಶೀಲನಾ ಸಮಿತಿ) ಸಿಂಧುತ್ವ ಪ್ರಮಾಣಪತ್ರ ಪಡೆದ ನಂತರ ನೇಮಕಾತಿ ಆದೇಶ ನೀಡಲಾಗುವುದು.-ನೇಮಕಾತಿ ಬಗ್ಗೆ ಅಂತಿಮ ತೀರ್ಮಾನವನ್ನು ಗದಗದ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳು ತೆಗೆದುಕೊಳ್ಳುತ್ತಾರೆ.
ಅರ್ಜಿ ಸಲ್ಲಿಸಲು ಕೊನೇ ದಿನ:28.11.2022ಅಧಿಸೂಚನೆಗೆ:http://bit.ly/3WYDKYWಮಾಹಿತಿಗಾಗಿ:https://gadag.nic.in/
ಹುತ್ರಿದುರ್ಗ ಬೆಟ್ಟದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಯುವಕ-ಯುವತಿಯ ಬಟ್ಟೆ ಬಿಚ್ಚಿ ಕಿರುಕುಳ, ಚಾರಣಿಗರಿಗೆ ಬೆದರಿಕೆ ಹಾಕಿ ದರೋಡೆ…

ಬಿಎಚ್​ಇಎಲ್​ನಲ್ಲಿ ಇಂಜಿನಿಯರ್​, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆಗೆ ನ.21 ಕೊನೇ ದಿನ

ಗಂಡನ ಮನೆಗೆ ಹೋಗವ್ವಾ… ಎಂದು ತಾಯಿ ಬುದ್ಧಿಮಾತು ಹೇಳಿದ್ದೇ ತಪ್ಪಾ? ಮನನೊಂದು ಸಾವಿನ ಮನೆಯ ಕದ ತಟ್ಟಿದ ಮಗಳು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × three =
Remember me
