ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಾವು ಮಂಡಿಸಿರುವ ಎರಡನೇ ಬಜೆಟ್‌ನಲ್ಲಿ ಕೃಷಿ, ವಿದ್ಯಾಭ್ಯಾಸ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿದ್ದು ಈ ಬಾರಿ ರೈತರಿಗೆ 5 ಲಕ್ಷ ರೂ.ವರಗೆ ಬಡ್ಡಿರಹಿತ ಸಾಲ ಪಡೆಯುವ ಅವಕಾಶವನ್ನು ನೀಡಲಾಗಿದೆ. ಈ ಮಿತಿ ಹಿಂದೆ 3 ಲಕ್ಷ ರೂ. ತನಕ ಇತ್ತು. ಅದನ್ನೀಗ ಹೆಚ್ಚಿಸಲಾಗಿದೆ.
ಇದರಿಂದ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ರೈತರಿಗೆ ಸುಲಭವಾಗಿ ಹಾಗೂ ಅಗತ್ಯಕ್ಕೆ ತಕ್ಕಂತೆ ಸಾಲ ಸೌಲಭ್ಯ ದೊರಕಿಸಿದಂತಾಗುತ್ತದೆ. ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ. ಗಳಷ್ಟು ಸಾಲ ವಿತರಿಸಲಾಗುವುದು.
ಇದರೊಂದಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ’ ಎಂಬ ನೂತನ ಯೋಜನೆಯಡಿ 2023-24ನೇ ಸಾಲಿನಿಂದ 10 ಸಾವಿರ ರೂ. ಗಳ ಹೆಚ್ಚುವರಿ ಸಹಾಯಧನ ನೀಡಲು ನಿರ್ಧರಿಸಿದ್ದೇವೆ. ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳನ್ನು ಖರೀದಿಸಲು ಇದರಿಂದ ಅನುಕೂಲವಾಗಲಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ. ಹಾಗೂ ನಬಾರ್ಡ್ ನ 7,500 ರೂ. ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 16 =
Remember me
