ಬೆಂಗಳೂರು:ಮಾಜಿ ಸಿಎಂ ಸಿದ್ದರಾಮಯ್ಯ ರೈತರ ಸಾಲ ಮನ್ನಾ ಘೋಷಣೆ ಮಾಡಿದರೂ ಅದು ಅರ್ಹ ಫಲಾನುಭವಿಗಳಿಗೆ ತಲುಪಲಿಲ್ಲ. ಈ ಬಗ್ಗೆ ನಾನು ಯಾರಿಗೆ ಬೇಕಾದರೂ ಚಾಲೆಂಜ್ ಮಾಡುವೆ. ಅದೇ ರೀತಿ ನನ್ನ ಕಾಲದಲ್ಲಿ ರೈತರ ಸಾಲ ಮನ್ನಾ ದುರುಪಯೋಗ ಆಗಿದ್ದರೆ ರಾಜಕೀಯ ನಿವೃತ್ತಿ ಪಡೆಯುವೆ ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಕಾರ್ಯಕರ್ತರಿಗೆ ಹಸಿರು ಹಾಲು ಹಾಕಿಸಿ ಮಂಡ್ಯದಲ್ಲಿ ರೈತ ಸಮಾವೇಶ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ 250ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರು. ಆಗ ಯಾವ ಕಾಂಗ್ರೆಸ್ ನಾಯಕರೂ ರೈತರ ಕುಟುಂಬಗಳ ಬಳಿ ಹೋಗಲಿಲ್ಲ. ಜೆಡಿಎಸ್ ಹೋಗಿ ಪರಿಹಾರ ನೀಡಿತ್ತು ಎಂದು ನೆನಪಿಸಿದರು.
ಮಾಜಿ ಶಾಸಕ ಮುನಿರತ್ನ ಜೆಡಿಎಸ್ ಸೇರ್ಪಡೆ ಪ್ರಶ್ನೆಯೇ ಬಂದಿಲ್ಲ. ಆ ಬಗ್ಗೆ ಯಾರೂ ನನ್ನ ಜತೆ ಚರ್ಚೆ ಮಾಡಿಲ್ಲ. ನಮ್ಮ ಪಕ್ಷದಲ್ಲಿ ಮೂರು ಜನ ಆಕಾಂಕ್ಷಿಗಳಿದ್ದಾರೆ. ಆ ಪೈಕಿ ಒಬ್ಬರನ್ನು ಅಂತಿಮಗೊಳಿಸಿ ಸೋಮವಾರ ನಮ್ಮ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ. ರಾಜರಾಜೇಶ್ವರಿನಗರದಲ್ಲಿ ಹಿಂದೆ ಒಕ್ಕಲಿಗರನ್ನು ತೆಗೆದು, ಈಗ ಒಕ್ಕಲಿಗರನ್ನು ಗೆಲ್ಲಿಸಿ ಅಂತ ಹೋಗಿದ್ದಾರೆ. ಯಾರಿಗೆ ಬೇಕಾದರೂ ಕಾಂಗ್ರೆಸ್‌ನವರು ಟೋಪಿ ಹಾಕುತ್ತಾರೆ. ತಮ್ಮ ಅನುಕೂಲಕ್ಕೆ ಜಾತಿ ಬಳಕೆ ಮಾಡಿಕೊಳ್ಳುತ್ತಾರೆ ಎಂದು ಹರಿಹಾಯ್ದರು.
ಮೊದಲೇ ಸಂಕಷ್ಟದಲ್ಲಿರುವ ಸರ್ಕಾರಕ್ಕೆ ಶಾಸಕರ ಕರೊನಾ ಬಿಲ್ ಹೊರೆ!

ಮಟಮಟ ಮಧ್ಯಾಹ್ನ ಒಂದೇ ಕುಟುಂಬದ ಮೂರು ಮಕ್ಕಳ ಪ್ರಾಣ ಹೊತ್ತೊಯ್ದ ಜವರಾಯ!

ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು, ತಲೆ-ದೇಹ ಇಬ್ಭಾಗ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 14 =
Remember me
