|ಮೃತ್ಯುಂಜಯ ಕಪಗಲ್ಬೆಂಗಳೂರು
ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಸರಣಿ ಗೆಲುವು, ಗ್ರಾ.ಪಂ. ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ಬೆಂಬಲಿತರ ಮೇಲುಗೈ ಎಂದು ಬೀಗುತ್ತಿದ್ದ ಆಡಳಿತಾರೂಢ ಭಾರತೀಯ ಜನತಾಪಕ್ಷಕ್ಕೆ ನಗರ-ಪಟ್ಟಣಗಳ ಮತದಾರರು ಮುಟ್ಟಿ ನೋಡಿಕೊಳ್ಳುವಂತಹ ತೀರ್ಪು ನೀಡಿದ್ದಾರೆ. ಬಳ್ಳಾರಿ ನಗರಪಾಲಿಕೆಯು ಸೇರಿ 10 ನಗರ-ಪಟ್ಟಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿದ್ದು, ಕೊಡಗು ಜಿಲ್ಲೆ ಮಡಿಕೇರಿ ನಗರಸಭೆ ಅಧಿಕಾರ ಚುಕ್ಕಾಣಿ ಹಿಡಿದು ಸಮಾಧಾನ ಮಾಡಿಕೊಂಡಿದೆ. ಕರೊನಾ ಸೋಂಕು ಹಾವಳಿ ಮಧ್ಯೆ ರಾಜಕೀಯವಾಗಿ ನಗರ-ಪಟ್ಟಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಗಮನ ಸೆಳೆದಿತ್ತು. ನಗರಪಾಲಿಕೆ, ನಗರ-ಪುರಸಭೆ, ಪಟ್ಟಣ ಪಂಚಾಯತ್ ಒಳಗೊಂಡು 10 ಸಂಸ್ಥೆಗಳ 263 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 57 ಸ್ಥಾನಗಳನ್ನು ಗೆಲ್ಲುವಲ್ಲಿ ಬಿಜೆಪಿ ಶಕ್ತವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಉಸ್ತುವಾರಿ ಹೊತ್ತ ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಪ್ರಧಾನಿ ಮೋದಿ ವರ್ಚಸ್ಸು, ಅಲೆಯೆಂದು ಬೀಗುತ್ತಿದ್ದ ಬಿಜೆಪಿ ನಾಯಕರಿಗೆ ನಗರ-ಪಟ್ಟಣಗಳ ಮತದಾರರು ಬಿಸಿ ಮುಟ್ಟಿಸಿದ್ದಾರೆ. ಬಿಜೆಪಿ ಎಂದರೆ ಗೆಲ್ಲುವ ಪಕ್ಷವೆಂದು ರಾಜ್ಯದ ಜನರು ನಿರ್ಧರಿಸಿಯಾಗಿದೆ ಎಂದು ಹೇಳಿಕೊಳ್ಳುತ್ತಿದ್ದ ಕೆಲವು ಹಿರಿಯ ಮುಖಂಡರ ಕಣ್ತೆರೆಸಿದ್ದಾರೆ.
ಮಡಿಕೇರಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ಪ್ರಧಾನಿ ಮೋದಿ, ರಾಜ್ಯದಲ್ಲಿ ಸಿಎಂ ಬಿಎಸ್ ವೈ ಅಭಿವೃದ್ಧಿ ಕಾರ್ಯಗಳಿಗೆ ಸಿಕ್ಕಿದ ಜಯ. ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ.
|ನಳಿನ್ ಕುಮಾರ್ ಕಟೀಲ್ರಾಜ್ಯ ಬಿಜೆಪಿ ಅಧ್ಯಕ್ಷ

ಮಂತ್ರಾಲಯ ಸ್ವಾಮೀಜಿಯವರ ಆಪ್ತ ಕಾರ್ಯದರ್ಶಿ ಇನ್ನಿಲ್ಲ; ಎಸ್‌.ಎನ್. ಸುಯಮೀಂದ್ರಾಚಾರ್‌ ಕೋವಿಡ್‌ಗೆ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 16 =
Remember me
