ಬೆಂಗಳೂರು:ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸೀಮಾ ನಿಗದಿ ಆಯೋಗದ ಬಗ್ಗೆ ಸ್ಪಷ್ಟನೆ ಕೋರಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಬುಧವಾರ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ.ಬಿ. ಬಸವರಾಜು ಆಯೋಗದ ವಕೀಲರಾದ ಫಣೀಂದ್ರ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ರಾಜ್ಯ ಸರ್ಕಾರ ಸೀಮಾ ನಿಗದಿ ಆಯೋಗವನ್ನು ವಿಧಾನಮಂಡಲದಲ್ಲಿ ವಿಧೇಯಕ ಅಂಗೀಕಾರ ಮಾಡುವ ಮೂಲಕ ರಚನೆ ಮಾಡಿದೆ. ಸೀಮಾ ನಿಗದಿ ಆಯೋಗ ತನ್ನ ಕೆಲಸ ಮಾಡುತ್ತಿದ್ದು, ಚುನಾವಣಾ ಆಯೋಗಕ್ಕೆ ಇದ್ದ ಅಧಿಕಾರವನ್ನು ಆ ಆಯೋಗಕ್ಕೆ ನೀಡಿದೆ. ಇಂತಹ ಸಂದರ್ಭದಲ್ಲಿ ಚುನಾವಣೆ ನಡೆಸುವ ಬಗ್ಗೆ ಸ್ಪಷ್ಟನೆ ಕೊಡುವಂತೆ ಸುಪ್ರೀಂ ಕೋರ್ಟ್ ಅನ್ನು ಕೋರಲು ತೀರ್ವನಿಸಿದೆ. ಹಿಂದುಳಿದ ವರ್ಗಗಳ ಮೀಸಲು ವಿಚಾರದಲ್ಲಿಯೂ ಕೆಲವೊಂದು ಸ್ಪಷ್ಟನೆಗಳ ಅಗತ್ಯವಿದೆ. ಆದ್ದರಿಂದ ನ್ಯಾಯಾಲಯದಲ್ಲಿಯೇ ಮನವಿ ಮಾಡಲಿದೆ. ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ತಡೆಯಾಜ್ಞೆ ಇದೆ. ಅದರ ಜತೆಗೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಹೈಕೋರ್ಟ್​ನಲ್ಲಿ ಮೊಕದ್ದಮೆ ಬಾಕಿ ಇದೆ. ಆದ್ದರಿಂದ ಇವುಗಳನ್ನು ತೆರವು ಮಾಡಿಸಲು ಮೆಮೋ ಹಾಕುವಂತೆ ರಾಜ್ಯ ಸರ್ಕಾರಕ್ಕೂ ಪತ್ರ ಬರೆಯಲು ರಾಜ್ಯ ಚುನಾವಣಾ ಆಯೋಗ ತೀರ್ವನಿಸಿದೆ.
ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಜತೆ ಚರ್ಚೆ ನಡೆಸಿ ಅಭಿಪ್ರಾಯ ಪಡೆಯಲಾಗಿದೆ. ನ್ಯಾಯಾಲಯದ ಮುಂದಿರುವ ಪ್ರಕರಣ ತೆರವಾಗಿ, ಸೀಮಾ ನಿಗದಿ ಆಯೋಗದ ಬಗ್ಗೆ ನ್ಯಾಯಾಲಯದಿಂದ ಸ್ಪಷ್ಟನೆ ಸಿಕ್ಕ ನಂತರ ಚುನಾವಣೆ ನಡೆಸಲು ಆಯೋಗ ಸಿದ್ಧವಿದೆ.
|ಡಾ. ಬಿ. ಬಸವರಾಜುಆಯುಕ್ತರು, ರಾಜ್ಯ ಚುನಾವಣಾ ಆಯೋಗ
ಸುಪ್ರೀಂ ಕೋರ್ಟ್ ಆದೇಶದನ್ವಯ ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆ ಚುನಾವಣೆ ಘೊಷಣೆ ಸಾಧ್ಯತೆ ಇದೆ. ಚುನಾವಣೆಗೆ ಬಿಜೆಪಿ ತಯಾರಾಗಿದೆ. ಹಿಂದುಳಿದ ವರ್ಗಕ್ಕೆ ಸಾಮಾನ್ಯ ಮೀಸಲಾತಿಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗುವುದು. ಮೀಸಲಾತಿಯಿಂದ ಬಿಜೆಪಿಗೆ ಯಾವುದೇ ತೊಡಕಾಗದು.
| ಬಿಜೆಪಿ ರಾಜ್ಯಾಧ್ಯಕ್ಷರು
ಬೆಂಗಳೂರು:ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದಿಂದ ಸಾಮಾಜಿಕ ನ್ಯಾಯದ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಲಿದೆ. ಪರಿಸ್ಥಿತಿ ಕೈಮೀರಿಹೋಗುವ ಮೊದಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ವಿಫಲವಾದರೆ ಮುಂದಿನ ಬೆಳವಣಿಗೆಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಯ ಆದೇಶ ಎಲ್ಲ ರಾಜ್ಯಗಳಿಗೆ ಅನ್ವಯಿಸಿದೆ ಎಂದು ಹೇಳುತ್ತಲೇ ಇದ್ದರೂ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗದೆ ಕಾಲಹರಣ ಮಾಡುತ್ತಿರುವುದು ವಿಷಾದನೀಯ. ರಾಜ್ಯ ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ, ಸರ್ವಜನರ ಹಿತದ ವಿಷಯದಲ್ಲಿ ರಾಜಕೀಯ ಮಾಡಲು ಹೋಗದೆ ಕಾಂತರಾಜ್ ಆಯೋಗದ ವರದಿಯನ್ನು ಒಪ್ಪಿಕೊಳ್ಳಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈಗಿನ ಬಿಕ್ಕಟ್ಟಿಗೆ ಸುಪ್ರೀಂ ಕೋರ್ಟ್ ಪರಿಹಾರದ ಮಾರ್ಗ ಸೂಚಿಸಿದ್ದರೂ, ರಾಜ್ಯದ ಬಿಜೆಪಿ ಸರ್ಕಾರ ವೃಥಾ ಕಾಲಹರಣ ಮಾಡಿ ಅವಕಾಶವನ್ನು ಕಳೆದುಕೊಳ್ಳುತ್ತಿದೆ. ಈ ಬಗ್ಗೆ ಎರಡು ತಿಂಗಳುಗಳ ಹಿಂದೆಯೇ ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಎಚ್ಚರಿಸಿದ್ದೆ ಎಂದಿರುವ ಸಿದ್ದರಾಮಯ್ಯ, ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂ ಕೋರ್ಟ್ ವಿಸõತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತ ಬಂದಿದೆ. ಇದು ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ ಎಂದಿದ್ದಾರೆ.
ಕೋರ್ಟ್ ಆದೇಶದಿಂದ ಸೃಷ್ಟಿಯಾಗಿರುವ ಬಿಕ್ಕಟ್ಟಿಗೆ, ಹಿಂದುಳಿದ ಜಾತಿಗಳಿಗೆ ಆಗಲಿರುವ ಈ ಅನ್ಯಾಯವನ್ನು ತಪ್ಪಿಸಲು ರಾಜ್ಯ ಸರ್ಕಾರ ಕಾನೂನು ತಜ್ಞರ ಜತೆ ಸಮಾಲೋಚಿಸಿ, ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಸಮರೋಪಾದಿಯಲ್ಲಿ ಕಾನೂನು ಹೋರಾಟಕ್ಕೆ ತಯಾರಾಗಬೇಕು ಎಂದು ಆಗ್ರಹಿಸಿದ್ದಾರೆ.
ಸ್ವಚ್ಛತಾ ಅಭಿಯಾನಕ್ಕೂ ಕೊಂಕು ನುಡಿದ ಪಂಚಾಯತ್ ಅಧ್ಯಕ್ಷ; ಲಾರಿ ಕಳಿಸೋಕೂ ಸಿದ್ಧ ಅಂದ ನಟ ಅನಿರುದ್ಧ

ವಿದ್ಯುತ್ ಸ್ಪರ್ಶದಿಂದಾಗಿ ‘ಜೂನಿಯರ್ ರವಿಚಂದ್ರನ್​’ ಸಾವು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
