ಬೆಂಗಳೂರು:ನಗರ-ಪಟ್ಟಣ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ಅಧಿಸೂಚನೆ ಪ್ರಕಟವಾಗಿದೆ. ಯಾವುದೇ ಸಂದರ್ಭದಲ್ಲಿ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿರುವ ಕಾರಣ ಪ್ರತಿಪಕ್ಷ ಬಿಜೆಪಿ ತಯಾರಿ ನಡೆಸಿದೆ.
ಪಕ್ಷ ಬಹುಮತ ಗಳಿಸಿರುವ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಕೈತಪ್ಪದಂತೆ ನೋಡಿಕೊಳ್ಳುವುದು, ಒಂದೆರಡು ಸ್ಥಾನಗಳು ಕೊರತೆಯಿರುವೆಡೆ ಅಧಿಕಾರ ಗದ್ದುಗೆ ಏರಲು ಕಾರ್ಯತಂತ್ರ ಸೇರಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸುಸೂತ್ರವಾಗಿ ನಡೆಸಲು ಕಮಲಪಡೆ ಸಜ್ಜಾಗಿದೆ.
ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ನಿಭಾಯಿಸಲೆಂದು ಶಾಸಕರು ಮತ್ತು ಪಕ್ಷದ ರಾಜ್ಯ ಪದಾಧಿಕಾರಿಗಳನ್ನು ಉಸ್ತುವಾರಿಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬುಧವಾರ ನೇಮಿಸಿ, ಗುರುತರ ಜವಾಬ್ದಾರಿಯನ್ನು ಒಪ್ಪಿಸಿದ್ದಾರೆ.
ಪಿ.ರಾಜೀವ್: ಹಾವೇರಿ, ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಗದಗ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ. ಡಾ.ಶೈಲೇಂದ್ರ ಬೆಲ್ದಾಳೆ: ಬೀದರ್, ಕಲಬುರಗಿ ನಗರ, ಗ್ರಾಮಾಂತರ, ಯಾದಗಿರಿ. ಅಶ್ವಥ್ ನಾರಾಯಣ: ಮೈಸೂರು, ಚಾಮರಾಜನಗರ, ಹಾಸನ. ಕ್ಯಾಪ್ಟನ್ ಗಣೇಶ್ ಕಾರ್ಣಿಕ್: ಕೊಡಗು, ದಕ್ಷಿಣಕನ್ನಡ, ಉಡುಪಿ.
ಎನ್.ರವಿಕುಮಾರ್: ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಧುಗಿರಿ. ಮಹೇಶ್ ಟೆಂಗಿನಕಾಯಿ: ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ. ಚನ್ನಬಸಪ್ಪ: ಚಿಕ್ಕಮಗಳೂರು, ಶಿವಮೊಗ್ಗ, ಉತ್ತರಕನ್ನಡ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
