ತುಮಕೂರು:ಚುನಾವಣಾ ಸಮಯದಲ್ಲಿ ಕಾಂಗ್ರೆಸ್​ಗೆ ಬಿಜೆಪಿ ಟಕ್ಕರ್ ಕೊಟ್ಟಿದ್ದ ಎಲೆಕ್ಷನ್ ಹೊತ್ತಲ್ಲಿ ತುರುವೇಕೆರೆ ಕ್ಷೇತ್ರದಲ್ಲಿ ಶುರುವಾಯ್ತು ಪಕ್ಷಾಂತರ ಪರ್ವ ಶುರುವಾಗಿದೆ.
ತುರುವೇಕೆರೆ ಕ್ಷೇತ್ರದ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟವಾಗಿದ್ದು ಎಲೆಕ್ಷನ್ ಹೊತ್ತಲ್ಲಿ ಕಾಂಗ್ರೆಸ್​ಗೆ ದೊಡ್ಡ ಆಘಾತ ಉಂಟಾಗಿದ್ದು ಕಾಂಗ್ರೆಸ್ ತೊರೆದು ಬಿಜೆಪಿಗೆ 300ಕ್ಕೂ ಹೆಚ್ಚು ಸ್ಥಳೀಯ ಮುಖಂಡರು ಸೇರಿದ್ದಾರೆ.
ಬಿಜೆಪಿ ಪಡೆ‌ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷನಿಗೆ ಗಾಳ ಹಾಕಿದ್ದು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ನೇತೃತ್ವದಲ್ಲಿ 300ಕ್ಕೂ ಹೆಚ್ಚು ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ತುರುವೇಕೆರೆ ಕ್ಷೇತ್ರದ ಸಿಎಸ್​ಪುರ, ದಬ್ಬೆಘಟ್ಟ, ಮಾಯಸಂದ್ರ ಹೋಬಳಿಯ. 300 ಕ್ಕೂ ಹೆಚ್ಚು ಕಾಂಗ್ರೇಸ್ ಸ್ಥಳೀಯ ಮುಖಂಡರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಾಸಕ ಮಸಾಲೆ ಜಯರಾಮ್ ನೇತೃತ್ವದಲ್ಲಿ ಸ್ಥಳೀಯ ಕಾಂಗ್ರೆಸ್ಸಿಗರು ಬಿಜೆಪಿಗೆ ಸೇರಿದ್ದು ಹೂವಿನ ಹಾರ ಹಾಗೂ ಬಿಜೆಪಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ತುರುವೇಕೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೆಮೆಲ್ ಕಾಂತರಾಜು ಕ್ಷೇತ್ರದ ಸ್ಥಳೀಯ ಮುಖಂಡರನ್ನ ಯಾವುದಕ್ಕೂ ಪರಿಗಣನೆಗೆ ತೆಗೆದುಕೊಳ್ಳದೇ ನಿರ್ಲಕ್ಷ್ಯ ಮಾಡಿದ್ದಾರೆಂದು ವಿರುದ್ಧ ಕಾಂಗ್ರೆಸ್ ವಿರುದ್ಧ ಮುಖಂಡರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಸ್ಥಳೀಯ ಮುನ್ನೂರಕ್ಕೂ ಹೆಚ್ಚು ಮುಖಂಡರು ಕಾಂಗ್ರೆಸ್ ಗುಡ್ ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 8 =
Remember me
