ಮಂಗಳೂರು:ಪ್ರಸಿದ್ಧ ದೇವರಗುಂಡಿ ಫಾಲ್ಸ್ ಬಳಿ ಮಾಡೆಲ್​ಗಳು ಅರೆಬೆತ್ತಲೆ ಫೋಟೊಶೂಟ್ ನಡೆಸಿರುವುದು ಸ್ಥಳೀಯ ಆಕ್ರೋಶಕ್ಕೆ ಕಾರಣವಾಗಿದೆ.
ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದ ದೇವರಗುಂಡಿ ಫಾಲ್ಸ್​ ಬಳಿ ಬೆಂಗಳೂರಿನ ಬಿಕನಿ ಸುಂದರಿಯರು ಅರೆಬೆತ್ತಲಾಗಿ ಫೋಟೋಶೂಟ್​ ಮಾಡಿಸಿಕೊಂಡಿದ್ದಾರೆ. ಮಾಡೆಲ್ ಬೃಂಧಾ ಅರಸ್ ಸೇರಿದಂತೆ ಇಬ್ಬರು ಮಾಡೆಲ್​ಗಳು ಇದರಲ್ಲಿ ಭಾಗಿಯಾಗಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.
ಇದನ್ನೂ ಓದಿ:43 ವರ್ಷದ ವ್ಯಕ್ತಿಯಿಂದ 11ನೇ ವಯಸ್ಸಿಗೆ ತಾಯಿ: ಸಾವಿಗೂ ಮುನ್ನ ಬಾಲಕಿ ಬಿಚ್ಚಿಟ್ಟಳು ದುರಂತ ಕತೆ!
ದೇವರಗುಂಡಿ ಫಾಲ್ಸ್ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದೆ. ದೇವಸ್ಥಾನದಿಂದ ಸುಮಾರು 2 ಕಿಲೋಮೀಟರ್ ದೂರದಲ್ಲಿರುವ ದೇವರಗುಂಡಿ ಫಾಲ್ಸ್​ನಲ್ಲಿ ಸಾಕ್ಷಾತ್ ಶಿವನೇ ಸ್ನಾನಕ್ಕೆ ಬರುತ್ತಿದ್ದ ಅನ್ನೊ ಐತಿಹ್ಯವಿದೆ. ಇದರಿಂದ ಸ್ಥಳೀಯರೇ ಆ ಫಾಲ್ಸ್​ಗೆ ಇಳಿದು ಸ್ನಾನ ಮಾಡುವುದಿಲ್ಲ. ಇಂತಹ ಪವಿತ್ರ ಸ್ಥಳದಲ್ಲಿ ಅರೆಬೆತ್ತಲಾಗಿ ಫೋಟೋಶೂಟ್​ ಮಾಡಿಸಿರುವುದು ಇದೀಗ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ದೇವಸ್ಥಾನದ ಆಡಳಿತ ಮಂಡಳಿಗೆ ಸ್ಥಳೀಯರು ದೂರು ನೀಡಿದ್ದಾರೆ. ಆದರೆ, ಫೋಟೋಶೂಟ್​ಗೆ ನಾವು ಅನುಮತಿ ನೀಡಿಲ್ಲ ಎಂದು ಆಡಳಿತ ಮಂಡಳಿ ಹೇಳಿದೆ. ಆದರೂ ಗ್ರಾಮಸ್ಥರು ಮಾಡೆಲ್​ಗಳ ನಡೆಯ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಲು ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 + twelve =
Remember me
