ಕಲಬುರಗಿ:ಕ್ವಾರಂಟೈನ್ ಕೇಂದ್ರದಲ್ಲಿ ಇದ್ದವರನ್ನು ಕರೊನಾ ಪರೀಕ್ಷೆ ವರದಿ ಬರುವ ಮುನ್ನವೇ ಮನೆಗೆ ಕಳುಹಿಸುತ್ತಿರುವ ಕ್ರಮವನ್ನು ಸಮರ್ಥಿಸಿಕೊಂಡ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್​, ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಕುರಿತು ಮಾತನಾಡಿದ್ದಾರೆ.
ನಗರದ ಜಿಮ್ಸ್ ವೈದ್ಯಕೀಯ ಕಾಲೇಜಿಗೆ ಭಾನುವಾರ ಬೆಳಗ್ಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕ್ವಾರಂಟೈನ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇಲ್ಲ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆಯೇ ವ್ಯವಸ್ಥೆ ಮಾಡಲಾಗಿದೆ ಎಂದರು.ಇದನ್ನೂ ಓದಿರಿಕೆಪಿಸಿಸಿ ಕಟ್ಟಡದಲ್ಲಿ ಬೆಳ್ಳಂಬೆಳಗ್ಗೆ ಹೋಮ-ಹವನ, ಇದೋ ಡಿಕೆಶಿ ಸಂಕಲ್ಪ…
ಸದ್ಯಕ್ಕೆ ಮಹಾರಾಷ್ಟ್ರ ಹಾಗೂ ವಿದೇಶದಿಂದ ಬಂದವರನ್ನು ಮಾತ್ರ ಸಾಂಸ್ಥಿಕ ಕ್ವಾರಂಟೈನ್ ‌ಮಾಡಲಾಗುತ್ತಿದೆ ಎಂದ ಡಾ. ಕೆ. ಸುಧಾಕರ್​, ರಾಜ್ಯದಲ್ಲಿ ಮತ್ತೆ ಲಾಕ್​ಡೌನ್​ ಮಾಡುವ ಪ್ರಶ್ನೆಯೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜತೆ ಮಾತನಾಡಲಿದ್ದಾರೆ ಎಂದು ಹೇಳಿದರು.
ಇದಕ್ಕೂ ಮುನ್ನ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗಾಣಗಾಪುರದ ದತ್ತ ಮಂದಿರಕ್ಕೆ ಸಚಿವರು ಭೇಟಿ ಮಹಾರಾಜರ ದರ್ಶನ ಪಡೆದರು. ಕರೊನಾ ಮುಕ್ತಗೊಳಿಸುವಂತೆ ಪ್ರಾರ್ಥಿಸಿದರು. ಶಾಸಕ ಬಸವರಾಜ ಮತ್ತಿಮೂಡ, ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ್, ಆಡಳಿತ ಮಂಡಳಿ ನಿರ್ದೇಶಕ ಪ್ರಲ್ಹಾದ ಭಟ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿರಿಪತ್ನಿ ಜತೆಗಿದ್ದ ಪರಪುರುಷನ ಗಂಟಲು ಬಗೆದು ರಕ್ತ ಕುಡಿದ… ಬೆಚ್ಚಿ ಬೀಳೀಸುತ್ತೆ ಆರೋಪಿ ಬಾಯ್ಬಿಟ್ಟ ಸತ್ಯ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 3 =
Remember me
