ಬೆಂಗಳೂರು:ಲಾಕ್​ಡೌನ್ ಪರಿಣಾಮಕಾರಿಯಾಗಿ ಅನುಷ್ಠಾನ ಆಗದಿದ್ದರೆ ಬಂಧಿಯಾಗಿರುವ ದಿನಗಳು ಇನ್ನಷ್ಟು ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿನ ಜನರಿಗೆ ಸೂಚ್ಯವಾಗಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕರೊನಾ ಪಾಸಿಟಿವ್ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿವೆ. ಈ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಏರುಗತಿಯಲ್ಲಿದೆ. ಈ ಎಲ್ಲದರ ನಡುವೆ ಲಾಕ್​ಡೌನ್ ಉಲ್ಲಂಘಿಸಿ ಓಡಾಡುವವರ ಸಂಖ್ಯೆಯಂತೂ ಮಿತಿ ಮೀರುತ್ತಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ನಾಗರಿಕರ ಜವಾಬ್ದಾರಿಯನ್ನು ಸಿಎಂ ಮನವರಿಕೆ ಮಾಡಿಕೊಟ್ಟಿದ್ದಲ್ಲದೆ, ಲಾಕ್​ಡೌನ್ ಸಡಿಲಗೊಳಿಸುವ ಕೀಲಿ ಕೈ ನಿಮ್ಮ ಬಳಿಯೇ ಇದೆ ಎಂದು ಎಚ್ಚರಿಸಿದ್ದಾರೆ.
ಕೋವಿಡ್-19 ವ್ಯಾಪಕವಾಗಿ ಹರಡುತ್ತಿದ್ದರೂ ನಾಗರಿಕರು ಕಟ್ಟುನಿಟ್ಟಾಗಿ ಲಾಕ್​ಡೌನ್ ಪಾಲಿಸದಿರುವ ಬಗ್ಗೆ ದೂರುಗಳು ಬರುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ಚೆಂಡು ಈಗ ನಿಮ್ಮ ಅಂಗಳದಲ್ಲಿದೆ. ಕರೊನಾ ಹರಡುವಿಕೆ ತಡೆಗಟ್ಟಲು ನಿಮ್ಮಿಂದ ಮಾತ್ರ ಸಾಧ್ಯ ಎಂದು ಸೋಂಕಿನ ತೀವ್ರ ಪರಿಣಾಮಗಳನ್ನು ಪರೋಕ್ಷವಾಗಿ ಒತ್ತಿ ಹೇಳಿದ್ದಾರೆ. ಕಳೆದ ಕೆಲ ದಿನಗಳಲ್ಲಿ ಕೋವಿಡ್-19 ಪಾಸಿಟಿವ್ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವುನ್ನು ನೋಡುತ್ತಿದ್ದೇನೆ. ಮನೆಯಲ್ಲೇ ಇದ್ದು, ಸುರಕ್ಷಿತವಾಗಿರುವುದು ಹಾಗೂ ಸೋಂಕು ಹರಡುವ ಸರಪಳಿ ತುಂಡರಿಸುವುದು ಪ್ರಧಾನಮಂತ್ರಿ ಘೋಷಿಸಿದ ಲಾಕ್​ಡೌನ್ ಆಶಯವಾಗಿತ್ತು. ಅನಗತ್ಯವಾಗಿ ಓಡಾಡಿ ನಿಮ್ಮ ಹಾಗೂ ಇತರರ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸಬೇಡಿ. ಕೋವಿಡ್-19 ತಡೆಗಟ್ಟಲು ನಾವೆಲ್ಲರೂ ಸಾಮೂಹಿಕವಾಗಿ ಹೊಣೆಗಾರಿಕೆ ನಿಭಾಯಿಸೋಣ ಎಂದು ಮನವಿ ಮಾಡಿದ್ದಾರೆ. ರಾಜ್ಯದ ಜನತೆ ಲಾಕ್​ಡೌನ್​ನ ಹಿಂದಿನ ಆಶಯ ಹಾಗೂ ಉಲ್ಲಂಘನೆಯಿಂದ ದೇಶಕ್ಕೆ ಎದುರಾಗಬಹುದಾದ ಅಪಾಯ ಅರಿತುಕೊಂಡು ಕಟ್ಟುನಿಟ್ಟಾಗಿ ಆದೇಶ ಪಾಲಿಸಬೇಕಾಗಿದೆ ಎಂದವರು ಹೇಳಿದ್ದಾರೆ.
ರಾಜ್ಯದಲ್ಲಿ ಹಲವೆಡೆ ಉಲ್ಬಣ
ವಿಶ್ವದಾದ್ಯಂತ ಕೋವಿಡ್-19 ಸೋಂಕಿನಿಂದ ಉಂಟಾಗುತ್ತಿರುವ ಹಾನಿ ಎಲ್ಲರಿಗೂ ತಿಳಿದಿದೆ. ನಮ್ಮ ರಾಜ್ಯದಲ್ಲಿಯೂ ಬೀದರ್, ಮೈಸೂರು, ಮಂಗಳೂರು, ಬೆಂಗಳೂರು ನಗರ, ಕಲಬುರಗಿ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ದಿನೇದಿನೆ ಗಣನೀಯವಾಗಿ ಹೆಚ್ಚುತ್ತಿದೆ. ಈ ವೈರಸ್ ನಿಯಂತ್ರಣಕ್ಕಾಗಿ ಗಡಿ ಪ್ರದೇಶಗಳನ್ನು ಮುಚ್ಚುವುದು, ಸಾರ್ವಜನಿಕವಾಗಿ ಹೆಚ್ಚು ಹೆಚ್ಚು ಓಡಾಡುವಂತಹ ಪ್ರದೇಶಗಳಿಗೆ ನಿರ್ಬಂಧ ವಿಧಿಸಿರುವುದು, ಧಾರ್ವಿುಕ ಸ್ಥಳಗಳಲ್ಲಿ ಜನರು ಸೇರದಂತೆ ನಿರ್ಬಂಧಿಸುವುದರ ಜತೆಗೆ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಬಿಎಸ್​ವೈ ತಿಳಿಸಿದ್ದಾರೆ.
14 ಕೋಟಿ ಉದ್ಯೋಗ ಕಸಿವ ಕರೊನಾ
ಬೇಲೂರು: ಕರೊನಾ ಸೋಂಕಿನ ಪರಿಣಾಮ ಪ್ರವಾಸೋದ್ಯಮ ಕ್ಷೇತ್ರ ಒಂದರಲ್ಲೇ ಜಗತ್ತಿನಲ್ಲಿ 14 ಕೋಟಿ ಜನ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ಕಳೆದುಕೊಳ್ಳಲಿದ್ದಾರೆಂಬ ವರದಿ ಇದೆ. ಇದರಿಂದ ದೊಡ್ಡ ಆರ್ಥಿಕ ಹೊಡೆತ ಬೀಳಲಿದೆ ಎಂದು ಸಚಿವ ಸಿ.ಟಿ.ರವಿ ಹೇಳಿದರು. ಭಾನುವಾರ ಚನ್ನಕೇಶವಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ ನಂತರ ಪ್ರವಾಸೋದ್ಯಮ ಇಲಾಖೆ ಹೋಟೆಲ್​ನಲ್ಲಿ ಬೇಲೂರು-ಹಳೇಬೀಡು ದೇಗುಲಗಳ ಪ್ರವಾಸಿ ಮಾರ್ಗದರ್ಶಿಗಳಿಗೆ ಆಹಾರದ ಕಿಟ್ ವಿತರಿಸಿ ಮಾತನಾಡಿದರು. ಕರೊನಾ 50ಕ್ಕೂ ಹೆಚ್ಚು ದೇಶಗಳನ್ನು ಕಾಡುತ್ತಿದೆ. ಭಾರತದ 17 ರಾಜ್ಯಗಳು ಸಹ ಸಂಕಷ್ಟಕ್ಕೆ ಈಡಾಗಿವೆ ಎಂದರು.
ಅಸ್ವಸ್ಥ ತಂದೆಯ ನೋಡಲು ಜಮ್ಮುಗೆ ಸೈಕಲ್​ನಲ್ಲಿ ಹೊರಟವನಿಗೆ ಪೊಲೀಸರು ಮತ್ತು ಸಿಆರ್​ಪಿಎಫ್​ ಯೋಧರ ನೆರವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 10 =
Remember me
