ಬೆಂಗಳೂರು:ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಚೆಕ್​ಪೋಸ್ಟ್​ನಲ್ಲಿ ಗುರುವಾರ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್​ಪೆಕ್ಟರ್​ಗಳನ್ನು ಜಿಲ್ಲಾಧಿಕಾರಿ ಜಿ. ಎನ್.ಶಿವಮೂರ್ತಿ ಅವರು ಅಮಾನತು ಮಾಡಿದ್ದಾರೆ.
ಟಿ. ಕೆ.ಜಯಣ್ಣ ಹಾಗೂ ಕರಿಯಪ್ಪ ಅಮಾನತುಗೊಂಡ ಸಾರಿಗೆ ಅಧಿಕಾರಿಗಳು. ಇವರೊಂದಿಗೆ ಶಾಮೀಲಾಗಿದ್ದ ಮಾಜಿ ಹೋಮ್ ಗಾರ್ಡ್ ವಿವೇಕ್ ಸೇರಿದಂತೆ ಮೂವರನ್ನು ಲಂಚ ಪಡೆದ ಆರೋಪ ಹಿನ್ನೆಲೆಯಲ್ಲಿ ಅಪರ ಪೊಲೀಸ್ ಅಧೀಕ್ಷಕರಾದ ಸಜಿತ್ ಅವರಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕರಿಯಪ್ಪರಿಂದ 1250 ರೂ., ಜಯಣ್ಣರಿಂದ 1100 ರೂ. ಹಾಗೂ ವಿವೇಕ್​ರಿಂದ 800 ರೂ. ಹಾಗೂ ಚೆಕ್​ಪೋಸ್ಟ್ ಕಚೇರಿಯಲ್ಲಿದ್ದ 12,350 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಪ್ರಧಾನಿಯ ವಿಡಿಯೋ ಸಂದೇಶದ ಬೆನ್ನಲ್ಲೇ ಟ್ವಿಟರ್​ನಲ್ಲಿ ಹರಿದುಬಂತು ಬಗೆಬಗೆಯ ಹಾಸ್ಯಭರಿತ ಮೀಮ್ಸ್!​

ನಮಾಜ್​, ಧಾರ್ಮಿಕ ಹೆಸರಿನಲ್ಲಿ ಸರ್ಕಾರ ನಿಯಮ ಉಲ್ಲಂಘಿಸುವುದನ್ನು ಖಂಡಿಸಿದ ಮೌಲಾನಾ ಮಹಮೂದ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
