ಬೆಂಗಳೂರು: ರಾಜ್ಯದಲ್ಲಿ ಜಾರಿಗೆ ತಂದಿದ್ದ ಲಾಕ್​ಡೌನ್​ ನಿಯಮಗಳನ್ನು  ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಮತ್ತಷ್ಟು ಸಡಿಲಗೊಳಿಸಿ ಕೆಲವು ಚಟುವಟಿಕೆಗಳಿಗೆ ಅನುಮತಿ ನೀಡಿದ್ದಾರೆ.
ವಿಧಾನಸೌಧದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಕೆಲವು ಚಟುವಟಿಕೆಗಳಿಗೆ ಅನುಮತಿ ನೀಡಿದರು.
ಕಂಟೈನ್​ಮೆಂಟ್​ ವಲಯಗಳಲ್ಲಿ ಕಟ್ಟುನಿಟ್ಟಾಗಿ ಲಾಕ್​ಡೌನ್​ ಕ್ರಮ ಜಾರಿಗೊಳಿಸುವಂತೆ ಅವರು ಅಧಿಕಾರಿಗಳಿಗೆ ಇದೆ ವೇಳೆ ಸೂಚಿಸಿದರು.
ಯಾವುದಕ್ಕೆ ಅನುಮತಿ: ಖಾಸಗಿ ಬಸ್ ಸಂಚಾರ, ರಾಜ್ಯದೊಳಗೆ ರೈಲು ಓಡಾಟ, ಪಾರ್ಕ್ ಗಳಲ್ಲಿ ಬೆಳಗ್ಗೆ 7 ರಿಂದ 9 ಸಂಜೆ 5 ರಿಂದ 7 ಗಂಟೆ ಅವಧಿಯಲ್ಲಿ ವಾಯುವಿಹಾರ. ಲಾಲ್ ಬಾಗ್ ಹಾಗೂ ಕಬ್ಬನ್ ಪಾರ್ಕ್ ಕೂಡ ತೆರೆದಿರುತ್ತವೆ. ಕ್ರೀಡಾ ಚಟುವಟಿಕೆಗೆ ಅವಕಾಶ, ವಿವಾಹಗಳಿಗೆ ಷರತ್ತು ಬದ್ಧ ಅನುಮತಿ, ಬೀದಿ ಬದಿ ವ್ಯಾಪಾರಕ್ಕೆ ಅನುಮತಿ ನೀಡಲಾಗಿದೆ.
ಇದನ್ನೂ ಓದಿಮದ್ಯ ನಿಷೇಧ ಆಂದೋಲನ ಪದಾಧಿಕಾರಿಗಳಿಂದ ಸಿಎಂಗೆ ಮನಿ ಆರ್ಡರ್​: ಮದ್ಯ ಮಾರಾಟಕ್ಕೆ ಆಕ್ರೋಶ
ಯಾವುದಕ್ಕೆ ಅನುಮತಿ ಇಲ್ಲ:ಮಾಲ್, ಸಿನಿಮಾ, ಜಿಮ್, ಮೆಟ್ರೋ ರೈಲು, ಎಸಿ ಬಸ್​ ಸಂಚಾರಕ್ಕೆ ಮೇ 31ರವರೆಗೆ ಅವಕಾಶ ಇಲ್ಲ.
ಹೊರ ರಾಜ್ಯಗಳಿಂದ ಬಂದವರಿಗೆ 14 ದಿನ ಕ್ವಾರಂಟೈನ್​ ಕಡ್ಡಾಯ. ಎಲ್ಲರಿಗೂ ಮಾಸ್ಕ್​ ಕಡ್ಡಾಯ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸುವಂತೆ ಸಿಎಂ ಪೊಲೀಸರಿಗೆ ಸೂಚಿಸಿದ್ದಾರೆ.
ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್:ಸರ್ಕಾರ ಲಾಕ್​ಡೌನ್​ ನಿಯಮ ಸಡಿಲಗೊಳಿಸಿದ್ದರೂ ಇನ್ನು ಮುಂದೆ ಪ್ರತಿ ಭಾನುವಾರ ಸಂಪೂರ್ಣ ಲಾಕ್​ಡೌನ್​ ನಿಯಮ ಜಾರಿಯಲ್ಲಿರುತ್ತದೆ. ಅಂದು ಯಾವುದೇ ಅಂಗಡಿಗಳು ತೆರೆಯುವುದಿಲ್ಲ. ಬಸ್​ ಸಂಚಾರ ಇರುವುದಿಲ್ಲ. ಎಲ್ಲರೂ ಮನೆಯಲ್ಲಿ ಇರಬೇಕು ಎಂದು ಸೂಚಿಸಲಾಗಿದೆ.
ದೇವೇಗೌಡರನ್ನು ಪಂಜಾಬಿನ ಜನ ಸ್ಮರಿಸುವುದು ಏಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
