ಬೆಂಗಳೂರು:ರಾಜ್ಯರಾಜಧಾನಿಯಲ್ಲಿ ಲಾಕ್​ಡೌನ್​ ಘೋಷಣೆಗೆ ಹಿಂದೇಟು ಹಾಕುತ್ತಿದ್ದ ಸರ್ಕಾರ ಕೊನೆಗೂ ತಜ್ಞರ ಸಲಹೆಗೆ ತಲೆ ಬಾಗಿದ್ದು, ಜು.14ರ ರಾತ್ರಿಯಿಂದಲೇ ಒಂದು ವಾರ ಬೆಂಗಳೂರು ನಗರ ಮತ್ತು ಬೆಂ. ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್​ಡೌನ್ ಜಾರಿ ಮಾಡುವುದಾಗಿ ಘೋಷಿಸಿದೆ.
ಜು.14(ಮಂಗಳವಾರ) ರಾತ್ರಿ 8 ಗಂಟೆಯಿಂದ ಜು.22ರ ಬೆಳಗ್ಗೆ 5 ಗಂಟೆವರೆಗೆ ಬೆಂ. ನಗರ ಮತ್ತು ಬೆಂ. ಗ್ರಾಮಾಂತರ ಜಿಲ್ಲೆಗಳು ಕಂಪ್ಲೀಟ್​ ಲಾಕ್ ಆಗಲಿವೆ.
ಇದನ್ನೂ ಓದಿರಿಗ್ರಾಮಸ್ಥರ ಕಣ್ಣೆದುರಲ್ಲೇ 4 ವರ್ಷದ ಮಗುವನ್ನು ಹೊತ್ತೊಯ್ದ ಚಿರತೆ
ಲಾಕ್​ಡೌನ್​ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧ, ದಿನಬಳಕೆಯ ಅಗತ್ಯ ವಸ್ತು ಲಭ್ಯವಿರುತ್ತವೆ. ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳೂ ನಡೆಯಲಿವೆ. ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಟ್ವೀಟ್​ ಮಾಡಿದ್ದಾರೆ.
ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು. (1/2)
— B.S.Yediyurappa (@BSYBJP)July 11, 2020

ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವಿಕೆ, ಸರ್ಕಾರ ಹೊರಡಿಸುವ ಲಾಕ್​ಡೌನ್ ಸಂಬಂಧಿತ ಎಲ್ಲ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಸಿಎಂ ಮನವಿ ಮಾಡಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಇರುವ ಮೂಲಕ ಕರೊನಾ ನಿಯಂತ್ರಿಸುವ ಕಾರ್ಯದಲ್ಲಿ ಕೈ ಜೋಡಿಸಿ ಎಂದು ಸಾರ್ವಜನಿಕರಲ್ಲಿ ಕೋರಿದ್ದಾರೆ.
ಕೋವಿಡ್ ಸೋಂಕು ಮಣಿಸುವ ಹೋರಾಟದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು, ವೈದ್ಯಕೀಯ, ಪೊಲೀಸ್ ಸಿಬ್ಬಂದಿ ಹಾಗೂ ಎಲ್ಲ ಅಧಿಕಾರಿಗಳು, ಸ್ವಯಂ ಸೇವಕರು, ಪತ್ರಕರ್ತರಿಗೆ ಇದೇ ವೇಳೆ ಅಭಿನಂದನೆ ಸಲ್ಲಿಸಿದ್ದಾರೆ.
ಐವರ ಕೊಲೆಗೆ ಕಾರಣವಾಯ್ತು ಒಂದು ಲವ್​ ಸ್ಟೋರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − nine =
Remember me
