ನಂಜನಗೂಡು: ನಂಜನಗೂಡು ಕೈಗಾರಿಕಾ ವಲಯ ಪ್ರದೇಶದ 5 ಮಂದಿಯಲ್ಲಿ ಕರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ನಂಜನಗೂಡು ಅಪಾಯಕಾರಿ ಪ್ರದೇಶ ಎಂದು ಜಿಲ್ಲಾಧಿಕಾರಿ ಘೋಷಿಸಿದ್ದಾರೆ.
ಇಡೀ ಪಟ್ಟಣವನ್ನು ಲಾಕ್​ಡೌನ್​ ಮಾಡಲಾಗಿದೆ. ನಂಜನಗೂಡಿನ ಹೊರಭಾಗದಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮೈಸೂರು- ಊಟಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ಸೋಂಕು ಪತ್ತೆಯಾದ ನಂಜನಗೂಡು ಕೈಗಾರಿಕಾ ಪ್ರದೇಶಕ್ಕೆ ಯಾರು ಪ್ರವೇಶ ಮಾಡದಂತೆ ತಡೆಯಲಾಗಿದೆ.
ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 28 ಮಂದಿಯನ್ನು ಪ್ರತ್ಯೇಕಗೊಳಿಸಿ ಕ್ವಾರಂಟೈನ್​ನಲ್ಲಿ ಇಡಲಾಗಿದೆ ಎಂದು ಚಾಮರಾಜನಗರ ಜಿಲ್ಲಾ ವೈದ್ಯರು ತಿಳಿಸಿದ್ದಾರೆ.
ನಂಜನಗೂಡಿನ ಔಷಧ ತಯಾರಿಕಾ ಕಾರ್ಖಾನೆಯ ಸಿಬ್ಬಂದಿಗೆ ಸೋಂಕು ಹರಡಿತ್ತು. ಇವರನ್ನು ಕ್ವಾರಂಟೈನ್​ನಲ್ಲಿ ಇರುವಂತೆ ಸೂಚಿಸಿದ್ದರು. ಸೂಚನೆ ಉಲ್ಲಂಘಿಸಿ ಆತ 5 ಮಂದಿಗೆ ಸೋಂಕು ಹರಡಿದ್ದಾನೆ ಎಂದು ತಿಳಿದು ಬಂದಿದೆ.
ಕರೊನಾ ವೈರಸ್​ ಸೋಂಕು ದೃಢಪಟ್ಟಿರುವವರೊಂದಿಗೆ ಸಂಪರ್ಕ ಹೊಂದಿರುವ ಎಲ್ಲರನ್ನು ಶೋಧ ಮಾಡಲಾಗುತ್ತಿದೆ. ಅವರನ್ನು ಪತ್ತೆ ಮಾಡಿ ಚಿಕಿತ್ಸೆಗೆ ಒಳಪಡಿಸಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಆರೋಗ್ಯ ಅಧಿಕಾರಿ ರವಿ ತಿಳಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಮೊದಲು ಕರೊನಾ ವೈರಸ್​ ಪತ್ತೆಯಾದ ಹುಬೈ ಪ್ರಾಂತ್ಯ ಬಿಟ್ಟು ಗುಳೆ ಹೋಗುತ್ತಿರುವ ನಾಗರಿಕರು: ತಡೆದ ಪೊಲೀಸರ ಮೇಲೆ ಹಲ್ಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 4 =
Remember me
