ಬೆಂಗಳೂರು:ಇಂದು ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಲಿದ್ದಾರೆ.
ಅದಕ್ಕೂ ಮೊದಲು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದದಲ್ಲಿ ಎಲ್ಲ ಸಚಿವರು, ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಅವರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಈ ವೇಳೆ ಬಹುತೇಕ ಸಚಿವರು ಮೇ 16ರವರೆಗೆ ಲಾಕ್​ಡೌನ್​ ಮುಂದುವರಿಸಲು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಮೇ 16ರವರೆಗೆ ಲಾಕ್​ಡೌನ್​ ಮುಂದುವರಿದರೆ ರಾಜ್ಯದಲ್ಲಿ ಕೊವಿಡ್​ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತದೆ. ಹಾಗಾಗಿ ಅವಧಿ ವಿಸ್ತರಣೆ ಮಾಡಬೇಕು ಎಂದು ತಜ್ಞರೂ ಕೂಡ ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ ಸಿಎಂ ಯಡಿಯೂರಪ್ಪನವರು ರಾಜ್ಯದಲ್ಲಿ ಮೇ 16ರವರೆಗೆ ಲಾಕ್​ಡೌನ್​ ಮುಂದುವರಿಯಲು ಅವಕಾಶ ಮಾಡಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಮನವಿ ಮಾಡಿಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ.(ದಿಗ್ವಿಜಯ ನ್ಯೂಸ್​)
ಕಂಟ್ರೋಲಲ್ಲಿ ಕರ್ನಾಟಕ; ಸೋಂಕಿನ ವೇಗ ತಗ್ಗಿಸುವಲ್ಲಿ ರಾಜ್ಯಕ್ಕೆ ಗಣನೀಯ ಯಶಸ್ಸು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
