ಕೋಲಾರ:ಉತ್ತರ ಭಾರತದ ಹಲವು ರಾಜ್ಯಗಳು ಲಕ್ಷೋಪಲಕ್ಷ ಮಿಡತೆಗಳ ಹಾವಳಿಗೆ ತತ್ತರಿಸಿವೆ. ರಾಜಸ್ಥಾನ, ಮಧ್ಯಪ್ರದೇಶ, ಉತ್ತರಪ್ರದೇಶಗಳಲ್ಲಿ ಅಪಾರ ಬೆಳೆ ನಾಶ ಮಾಡಿರುವ ಮಿಡತೆಗಳ ಹಿಂಡು ಮಹಾರಾಷ್ಟ್ರ ಪ್ರವೇಶಿಸಿದ್ದು, ಕರ್ನಾಟಕ್ಕೆ ಕಾಲಿಡುವ ಭೀತಿ ಎದುರಾಗಿದೆ.
ಈ ಮಧ್ಯೆ ಕೋಲಾರದಲ್ಲಿ ಮಿಡತೆಗಳು ಕಂಡುಬಂದಿದ್ದು ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ. ಕೋಲಾರ ತಾಲೂಕಿನ ದಿಂಬ ಗೇಟ್​​ ಬಳಿ ಎಕ್ಕದ ಗಿಡದ ಮೇಲೆ ಮಿಡತೆಗಳು ಕಂಡುಬಂದು ರೈತರಲ್ಲಿ ಭಯ ಹೆಚ್ಚಿದ ಬೆನ್ನಲ್ಲೇ ಸ್ಥಳಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದೆ.
ಇದನ್ನೂ ಓದಿ:ಮಿಡತೆ ದಾಳಿ ತಡೆಗೆ ಡ್ರೋನ್ ಬಳಕೆ
ಈ ಮಿಡತೆಗಳು ಉತ್ತರ ಭಾರತದ ರಾಜ್ಯಗಳಲ್ಲಿ ದಾಳಿ ಮಾಡಿದವು ಅಲ್ಲ. ಇವು ಸಾಮಾನ್ಯವಾಗಿ ಕಂಡುಬರುವ ಮಿಡತೆಗಳು. ಆದರೆ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದರಿಂದ ಆತಂಕ ಮೂಡಿದೆ. ರೈತರು ಭಯ ಪಡುವ ಅಗತ್ಯವಿಲ್ಲ. ಈ ತರಹದ ಮಿಡತೆಗಳು ಬೆಳೆ ಹಾನಿ ಮಾಡೋದಿಲ್ಲ ಎಂದು ಕೋಲಾರ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ತಜ್ಞರು ಮತ್ತೊಮ್ಮೆ ಪರಿಶೀಲನೆ ನಡೆಸಲಿದ್ದಾರೆ ಎಂದಿದ್ದಾರೆ. (ದಿಗ್ವಿಜಯ ನ್ಯೂಸ್​)
https://www.facebook.com/VVani4U/videos/582315695753618/?t=11
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 6 =
Remember me
