ಬೆಂಗಳೂರು:ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ವರ್ಷಪೂರ್ತಿ ಕಾರ್ಯಕ್ರಮ ಆಯೋಜಿಸಲು ಸರ್ಕಾರ ತೀರ್ಮಾನಿಸಿದ್ದು, ಸುವರ್ಣ ಸಂಭ್ರಮದ ಕಳೆ ಹೆಚ್ಚಿಸಲು ಆಸಕ್ತರಿಂದ ಲಾಂಛನ ಮಾದರಿಯನ್ನು ಆಹ್ವಾನಿಸಿದೆ.
‘ಕರ್ನಾಟಕ ಸಂಭ್ರಮ 50’ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಶೀರ್ಷಿಕೆಯಡಿ ರಾಜ್ಯಾದ್ಯಂತ ವೈವಿಧ್ಯಮಯ, ವರ್ಣಮಯ ಹಾಗೂ ಅರ್ಥಪೂರ್ಣವಾಗಿ ಆಚರಿಸಿ ವಿಶೇಷ ಮೆರುಗು ನೀಡಲು ಕನ್ನಡ ಮತ್ತು ಇಲಾಖೆ ಉದ್ದೇಶಿಸಿದೆ.
ಸುವರ್ಣ ಮಹೋತ್ಸವಕ್ಕೆ ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟ, ಸುಂದರವಾದ ಲಾಂಛನ ಮಾದರಿಯನ್ನು ಆಸಕ್ತರು ಕಳುಹಿಸಬಹುದಾಗಿದೆ. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ 25 ಸಾವಿರ ರೂ. ಬಹುಮಾನ ನಿಗದಿಪಡಿಸಲಾಗಿದೆ.
ಲಾಂಛನ (ಲೋಗೋ)ದ ಮಾದರಿಯನ್ನು ಕಳುಹಿಸಲು ಸೆ.20 ರಿಂದ 30ರವರೆಗೆ ಅವಕಾಶವಿದೆ. ಆಸಕ್ತರು ಅಗತ್ಯ ಮಾಹಿತಿಯನ್ನು ಇಲಾಖೆಯ ಜಾಲತಾಣ http://www.kannadasiri.karnataka.gov.in ದಲ್ಲಿ ಪಡೆಯಬಹುದಾಗಿದೆ ಎಂದು ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
