ಬೆಂಗಳೂರು: ಧಾರವಾಡದಲ್ಲಿ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ 2ನೇ ಹಂತದ ಲೋಕಸಭೆಯ14 ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ 45 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದಿದ್ದಾರೆ.
ಒಟ್ಟು 248 ಪುರುಷ, 24 ಮಹಿಳೆಯರು ಸೇರಿದಂತೆ ಒಟ್ಟು 272 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 45 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದು, 206 ಪುರುಷ, 21 ಮಹಿಳೆಯರು ಒಳಗೊಂಡಂತೆ 227 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿದ್ದಾರೆ.
ಚಿಕ್ಕೋಡಿ 18, ಬೆಳಗಾವಿ 13, ಬಾಗಲಕೋಟೆ 22, ವಿಜಯಪುರ 8, ಕಲಬುರಗಿ 14, ರಾಯಚೂರು 8, ಬೀದರ್ 18, ಕೊಪ್ಪಳ 19, ಬಳ್ಳಾರಿ 10, ಹಾವೇರಿ 14, ಧಾರವಾಡ 17, ಉತ್ತರ ಕನ್ನಡ 13, ದಾವಣಗೆರೆ 30, ಶಿವಮೊಗ್ಗದಲ್ಲಿ 23 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ.
ದಾವಣಗೆರೆಯಲ್ಲಿ ಅತಿ ಹೆಚ್ಚು ಅಂದರೆ 30 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರೆ, ಕಡಿಮೆ ಎಂದರೆ ವಿಜಯಪುರ ಹಾಗೂ ರಾಯಚೂರು ಕ್ಷೇತ್ರದಲ್ಲಿ ತಲಾ 8 ಮಂದಿ ಸ್ಪರ್ಧೆಯಲ್ಲಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen + 7 =
Remember me
