ಬೆಂಗಳೂರು:ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಜೂನ್‌ 4ರಂದು ಬೆಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಕಮೀಷನರ್ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:ಮುಂಬೈನ ತಾಜ್ ಹೋಟೆಲ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಭದ್ರತಾ ಪಡೆಯಿಂದ ಶೋಧ ಕಾರ್ಯ!
ರಾಜ್ಯದಲ್ಲಿ ಏ. 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿದೆ. ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಿಗೂ ಸಹ ಏಪ್ರಿಲ್ 26ರಂದು ಮತದಾನ ನಡೆದಿದ್ದು, ಮತಯಂತ್ರಗಳನ್ನು ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಹಾಗೂ ಜಯನಗರದ ಎಸ್.ಎಸ್.ಎಂ.ಆರ್.ವಿ. ಕಾಲೇಜಿನಲ್ಲಿ ಇರಿಸಲಾಗಿದೆ. ಇನ್ನು ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂ.4ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಮತ ಎಣಿಕೆ ನಡೆಯುವ ಸಮಯದಲ್ಲಿ ಕೆಲ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು, ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರ, ವಿರುದ್ಧ ಪ್ರತಿಭಟನೆ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟವುಂಟುಮಾಡುವ ಸಾಧ್ಯತೆಗಳು ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೇ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಗಳು ಹಾಕುವಂತಿಲ್ಲ,‌ ಪಟಾಕಿ ಸಿಡಿಸುವಂತಿಲ್ಲ. ಹಾಗೆಯೇ ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಾಲಿವುಡ್‌ ನಿರ್ದೇಶಕ ಸೂರ್ಯ ಪ್ರಕಾಶ್​ ಹೃದಯಾಘಾತದಿಂದ ನಿಧನ; ಸೆಲೆಬ್ರಿಟಿಗಳ ಸಂತಾಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − thirteen =
Remember me
