ಬೆಂಗಳೂರು:ಲೋಕಸಭೆ ಚುನಾವಣೆ ಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಜನರಲ್ಲಿ ಕುತೂಹಲ ಗರಿಗೆದರಿದೆ. ಅಭ್ಯರ್ಥಿಗಳಲ್ಲಿ ಎದೆ ಬಡಿತ ಆರಂಭವಾಗಿದೆ. ರಾಜ್ಯದ 28 ಕ್ಷೇತ್ರಗಳ ಲಿತಾಂಶಕ್ಕೆ ಜನ ಕಾತರರಾಗಿದ್ದಾರೆ.
ಜೂ.4 ರಂದು ನಡೆಯುವ ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಭಾರೀ ಬಿಗಿ ಭದ್ರತೆಯಲ್ಲಿ ಮತ ಎಣಿಕೆ ನಡೆಯಲಿದೆ.ಮತದಾರ ಕಾಂಗ್ರೆಸ್ ಗ್ಯಾರಂಟಿಗೋ ಇಲ್ಲವೋ ಮೋದಿ ಗ್ಯಾರಂಟಿಗೆ ಮತ ಹಾಕಿದ್ದಾನೆ ಎಂಬುದು ಲಿತಾಂಶದ ಮೂಲಕ ಬಹಿರಂಗವಾಗಲಿದೆ.ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಲಿದೆ. ಮಧ್ಯಾಹ್ನ 2 ಗಂಟೆ ನಂತರ ಫಲಿತಾಂಶದ ಚಿತ್ರಣ ಹೊರಬೀಳಲಿದ್ದು, ಬಹುತೇಕ ಸಂಜೆಯೊಳಗೆ ಜನಾದೇಶ ಯಾರಿಗೆ ಎಂಬುದು ಸ್ಪಷ್ಟವಾಗಲಿದೆ.
ಮತಗಟ್ಟೆ ಸಮೀಕ್ಷೆಗಳು ಈ ಬಾರಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್ ಈ ಸಮೀಕ್ಷೆಗಳನ್ನು ಸಾರಾಸಗಟ ಅಲ್ಲಗಳೆದಿದೆ. ಹಾಗಾಗಿ ಜನರಲ್ಲಿ ಲಿತಾಂಶದ ಬಗ್ಗೆ ಕುತೂಹಲ ಹೆಚ್ಚಿದೆ.2023ರ ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಎರಡಂಕಿ ದಾಟಲಿದೆ ಎಂಬ ನಿರೀಕ್ಷೆ ಹೊಂದಿದೆ.
28 ಕ್ಷೇತ್ರಗಳ ಮತ ಎಣಿಕೆ ಆಯಾ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದೆ. ಶೇಕಡಾವಾರು ಮತದಾನ ಆಧರಿಸಿ ಮತಗಟ್ಟೆಗಳಲ್ಲಿ ಟೇಬಲ್ ಹಾಗೂ ಎಷ್ಟು ಸುತ್ತು ಎಣಿಕೆ ಎಂಬುದನ್ನು ನಿಗದಿಪಡಿಲಾಗಿದೆ.
ಮತ ಎಣಿಕೆ ಕೇಂದ್ರಕ್ಕೆ ಬಿಗಿ ಭದ್ರತೆ ನೀಡಲಾಗುತ್ತಿದ್ದು, ಎಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿವವರಿಗೆ ಗುರುತಿ ಚೀಟಿ ನೀಡಲಾಗಿದೆ. ಕ್ಷಣ ಕ್ಷಣಕ್ಕೂ ಒಳ ಹೋಗುವ ಹೊರ ಬರುವವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.
ಮತ ಎಣಿಕೆಗೆ ಸೂಕ್ಷ್ಮ ವೀಕ್ಷಕ, ಮತ ಎಣಕೆ ಮೇಲ್ವಿಚಾರಕರು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗಿದೆ. ಮತ ಎಣಿಕೆ ಸಿಬ್ಬಂದಿ, ಏಜೆಂಟರು ಬೆಳಗ್ಗೆ 6 ಗಂಟೆಗೆ ಮತ ಎಣಿಕೆ ಕೇಂದ್ರದಲ್ಲಿ ಹಾಜರಿರಲು ಸೂಚಿಸಲಾಗಿದೆ. ಗುರುತಿನ ಚೀಟಿ ಇರುವವರಿಗೆ ಮಾತ್ರ ಮತ ಎಣಿಕೆ ಕೇಂದ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತ ಎಣಿಕೆ ನಡೆಯುವ ಎಲ್ಲ ಕೊಠಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಕೆಲವು ಕಡೆ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದೆ.ನಿಷೇಧಾಜ್ಞೆ ಜಾರಿ:ಮತ ಎಣಿಕೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸೋಮವಾರ ಸಂಜೆ 6 ರಿಂದ ಜೂ. 5ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
