ಬೆಂಗಳೂರು:ಕೇಂದ್ರ ಚುನಾವಣಾ ಆಯೋಗವು ಮಾರ್ಚ್‌ 16, 2024 (ಶನಿವಾರ)ರಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ.
ಇದನ್ನೂ ಓದಿ:ಆಂಧ್ರಪ್ರದೇಶ: 25 ಲೋಕಸಭೆ, 175 ವಿಧಾನಸಭೆ ಕ್ಷೇತ್ರಗಳಿಗೆ ವೈಎಸ್​ಆರ್​ಸಿಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!
ಲೋಕಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿ ಹಾಗೂ ಇನ್ನಿತರೆ ವಿಷಯಗಳ ಕುರಿತು ಇಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು. ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಿ ಎಲ್ಲಿಯೂ ಉಲ್ಲಂಘನೆಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಬೆಂಗಳೂರು ನಗರದಲ್ಲಿ ಅಲರ್ಟ್ ಆಗಿದ್ದು, ಮಾದರಿ ನೀತಿಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ತಿಳಿಸಿದ್ದು, ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚಿಸಿದ್ದಾರೆ. ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ ಜಾಹೀರಾತುಗಳನ್ನ ತೆಗೆಯಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ.
ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಬಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.
ನಿಯಂತ್ರಣ ಕೊಠಡಿ ಸ್ಥಾಪನೆ:ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾಧಿಕಾರಿ(RO), ಮತದಾರ ನೋಂದಣಾಧಿಕಾರಿ(ARO) ರವರ ಕಚೇರಿಗಳಲ್ಲಿ 24 ಗಂಟೆಯೊಳಗಾಗಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು. ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ‌ ಮೇಲೆ‌ ನಿಗಾವಹಿಸಲು ಎಫ್‌ಎಸ್‌ಟಿ, ಎಸ್‌ಎಸ್‌ಟಿ ಸೇರಿದಂತೆ ಇನ್ನಿತರೆ ತಂಡಗನ್ನು ಸಕ್ರಿಯಗೊಳಿಸಬೇಕು. ಜೊತೆಗೆ, ಪ್ರಮುಖ ಸ್ಥಳಗಳಲ್ಲಿ ಕೂಡಲೆ ಚೆಕ್ ಪೂಸ್ಟ್ ಗಳನ್ನು ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೊದಲ ಹಂತದ ಮತದಾನ ಏಪ್ರಿಲ್‌ 26ರಂದು ನಡೆಯಲಿದ್ದರೆ, ಎರಡನೇ ಹಂತದ ಮತದಾನ ಮೇ7ರಂದು ನಡೆಯಲಿದೆ. ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದ್ದು, ಜೂನ್‌ 4 ರಂದು ಫಲಿತಾಂಶ ಬರಲಿದೆ.
ಬೆಂಗ್ಳೂರಿನ ಐಪಿಎಲ್‌ ಪಂದ್ಯ ಸ್ಥಳಾಂತರ ಮಾಡಿದ್ರೆ ಕರ್ನಾಟಕ ಬಂದ್!: ಎಚ್ಚರಿಕೆ ನೀಡಿದ ವಾಟಾಳ್ ​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen − fourteen =
Remember me
