ಬೆಂಗಳೂರು:ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇರೆಗೆ ರಾಜ್ಯದ ೧೦ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟ್ಯಂತರ ರೂ. ಮೌಲ್ಯದ ನಗದು, ಆಸ್ತಿ ಪತ್ತೆಯಾಗಿದೆ.
ಲೋಕಾಯುಕ್ತ ಪೊಲೀಸರು ಮಂಡ್ಯ, ತುಮಕೂರು, ಬಳ್ಳಾರಿ, ವಿಜಯನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಪ್ಪಳ, ಮೈಸೂರು, ಮಂಗಳೂರು ಮತ್ತು ಹಾಸನ ಜಿಲ್ಲೆಯ ಅಧಿಕಾರಿಗಳ ಮೇಲೆ ಕಾರ್ಯಾಚರಣೆ ನಡೆಸಲಾಗಿದ್ದು, ಬೆಂಗಳೂರು ಸೇರಿದಂತೆ ಅವರಿಗೆ ಸೇರಿದ ೪೧ಕ್ಕೂ ಹೆಚ್ಚು ಸ್ಥಳಗಳ ಮೇಲೆ ೪೧ ಅಧಿಕಾರಿಗಳ ನೇತೃತ್ವದ ತಂಡ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದೆ.
ರೇಣುಕಮ್ಮ ಬಳಿ ೨.೭೭ ಕೋಟಿ ರೂ.ಆಸ್ತಿ ಪತ್ತೆ:ದಾಳಿಗೊಳಗಾದ ಅಧಿಕಾರಿಗಳ ಪೈಕಿ ಅರಣ್ಯಾಧಿಕಾರಿ ರೇಣುಕಮ್ಮ ಅವರ ಬಳಿ ಹೆಚ್ಚು ಆಸ್ತಿ ಮೌಲ್ಯ ಪತ್ತೆಯಾಗಿದ್ದು, ೨.೭೭ ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ವಿಜಯನಗರದ ಜೆಸ್ಕಾಂ ಅಧಿಕಾರಿ ಆರ್.ಆರ್.ಭಾಸ್ಕರ್ ಬಳಿಕ ಎಂಟು ನಿವೇಶನಗಳು, ಮೂರು ಮನೆಗಳು ಇರುವುದು ಪತ್ತೆಯಾಗಿದೆ. ಬಳ್ಳಾರಿಯ ಸ್ವಾತಕೋತ್ತರ ಕೇಂದ್ರದ ನಿರ್ದೇಶಕ ಬಿ.ರವಿ ಬಳಿಕ ಏಳು ನಿವೇಶನಗಳು ಪತ್ತೆಯಾಗಿವೆ. ಮಂಡ್ಯದ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಹರ್ಷ ಅವರ ಕಚೇರಿ, ಮನೆ ಹಾಗೂ ಅವರ ಮಾವನ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಅಲ್ಲದೇ, ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಿವಾಸವಿದ್ದು, ಅಲ್ಲಿಯೂ ಪರಿಶೀಲನೆ ನಡೆಸಲಾಗಿದೆ.
ಮಧುಗಿರಿಯಲ್ಲಿ ಕೆಆರ್‌ಐಡಿಎಲ್ ಸಹಾಯಕ ಇಂಜನಿಯರ್ ಎ.ಹನುಂತರಾಯಪ್ಪ, ಮಂಡ್ಯದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ಆರ್.ಹರ್ಷ, ಬಳ್ಳಾರಿ ಜಿಲ್ಲೆಯ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಬಿ.ರವಿ, ವಿಜಯನಗರ ಜಿಲ್ಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ಆರ್.ಭಾಸ್ಕರ್, ಚಾಮರಾಜನಗರ ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪಿ.ರವಿಕುಮಾರ್, ಚಿಕ್ಕಮಗಳೂರು ಜಿಲ್ಲೆಯ ವಾಣಿಜ್ಯ ತೆರಿಗೆ ಅಧಿಕಾರಿ ಕೆ.ಆರ್.ನೇತ್ರಾವತಿ, ವಿಜಯನಗರ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯ ಆರ್‌ಎಫ್‌ಒ ರೇಣುಕಮ್ಮ, ಮೈಸೂರು ಜಿಲ್ಲೆಯಲ್ಲಿ ಮೂಡಾದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಂ.ಎನ್.ಯಜ್ಞೇಂದ್ರ, ಮಂಗಳೂರಿನಲ್ಲಿ ಮೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಶಾಂತ ಕುಮಾರ್, ಹಾಸನ ಜಿಲ್ಲೆಯಲ್ಲಿ ಆಹಾರ ನಿರೀಕ್ಷಕ ಜಿ.ಪಿ.ಜಗನ್ನಾಥ ಅವರಿಗೆ ಸೇರಿದ ಸ್ಥಳಗಳ ಮೇಲೆ ಶೋಧ ಕಾರ್ಯ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + ten =
Remember me
