ಬೆಂಗಳೂರು:ಡಿಜಿಟಲ್ ಮೀಟರ್ ಅಳವಡಿಸಲು 40 ಸಾವಿರ ರೂ. ಲಂಚ ಪಡೆಯುತ್ತಿದ್ದ ಬೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಪೊಲೀಸರಿಗೆ ಟ್ರ್ಯಾಪ್ ಆಗಿದ್ದಾರೆ. ಬಸವೇಶ್ವರನಗರದ 3ನೇ ಉಪ ವಿಭಾಗ ಕಚೇರಿ ಸಹಾಯ ಇಂಜಿನಿಯರ್ ಆನಂದ್ ಬಂಧಿತ.
ಹೊಸದಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿ ಡಿಜಿಟಲ್ ಮೀಟರ್ ಅಳವಡಿಸಿ ಆರ್ ಆರ್ ನಂಬರ್ ಕೊಡುವಂತೆ ಕೋರಿ ಬಿ.ಬಿ. ಮಂಜೇಶ್ ಎಂಬಾತ ಬಸವೇಶ್ವರನಗರದ ಬೆಸ್ಕಾಂ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪಡೆದ ಆನಂದ್, 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ಇದಕ್ಕೆ ಒಪ್ಪದ ಮಂಜೇಶ್, ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲು ಮಾಡಿಕೊಂಡ ಲೋಕಾಯುಕ್ತ ಪೊಲೀಸರು, ಆರೋಪಿ ಆನಂದ್ ದೂರುದಾರರ ಕಡೆಯಿಂದ 40 ಸಾವಿರ ರೂ. ನಗದು ಪಡೆಯುವಾಗ ಟ್ರ್ಯಾಪ್ ಮಾಡಿದ್ದಾರೆ. ಮಹಜರ್ ನಡೆಸಿ ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + fifteen =
Remember me
