ವಿಜಯಪುರ:ರಾಜ್ಯ-ದೇಶದಲ್ಲಿ ಜನರು ಹೃದಯಾಘಾತಕ್ಕೀಡಾಗಿ ಮೃತಪಡುತ್ತಿರುವ ಪ್ರಕರಣ ಮುಂದುವರಿದಿದ್ದು, ಇದೀಗ ಲೋಕಾಯುಕ್ತ ಡಿವೈಎಸ್​ಪಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಪ್ರಕರಣ ವರದಿಯಾಗಿದೆ.
ವಿಜಯಪುರ ಜಿಲ್ಲಾ ಲೋಕಾಯುಕ್ತದಲ್ಲಿ ಡಿವೈಎಸ್​ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಸಾವಿಗೀಡಾದವರು. ಇವರು ಇಂದು ವಿಜಯಪುರ ಜಿಲ್ಲಾ‌ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿದ್ದರು. ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ರಾತ್ರಿ ಊಟ ಮಾಡಿ ಮಲಗಿದ್ದ ಬಾಲಕಿ ಬೆಳಗ್ಗೆ ಅಸ್ವಸ್ಥ; ಮುರಾರ್ಜಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು!
ಅರುಣ್ ನಾಯಕ್ ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದು, ಅವರೊಂದಿಗೆ ತಾಯಿಯೂ ನೆಲೆಸಿದ್ದಾರೆ. ಘಟನೆ ಕುರಿತು ತಿಳಿದು ಪತ್ನಿ-ಪುತ್ರ ವಿಜಯನಗರದತ್ತ ಹೊರಟಿದ್ದಾರೆ. ಖಾಸಗಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳ ಭೇಟಿ ನೀಡಿದ್ದಾರೆ.
ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nine − one =
Remember me
