ಬೆಂಗಳೂರು:ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಬೇಟೆ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಸೋಮವಾರ ನಸುಕಿನ ಜಾವ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಅಧಿಕಾರಿಗಳಿಗೆ ಶಾಕ್​ ನೀಡಿದ್ದಾರೆ. ಹಲವು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳು ಸೇರಿದಂತೆ ಏಕಕಾಲದಲ್ಲಿ 90 ಕಡೆ ​ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಏಕಕಾಲದಲ್ಲಿಯೇ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರು, ಚಿತ್ರದುರ್ಗ, ಕಲಬುರಗಿ, ರಾಯಚೂರು, ಹಾಸನ, ಬೀದರ್, ದೇವದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ 11 ಕಡೆ ದಾಳಿಬೆಂಗಳೂರಿನಲ್ಲಿಯೇ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೆಆರ್‌ ಪುರದಲ್ಲಿನ ಎಆರ್ ಓ ಚಂದ್ರಪ್ಪ ಬಿರಜ್ಜನವರ್​​​​​ಗೆ ಸಂಬಂಧಪಟ್ಟ ಮೂರು ಕಡೆ ದಾಳಿ ಮಾಡಲಾಗಿದೆ. ಬಿಬಿಎಂಪಿ ಹೆಗ್ಗನಹಳ್ಳಿ ವಾರ್ಡ್ ನ ಆರ್.ಆರ್.ನಗರ ವಲಯಾಧಿಕಾರಿಯಾಗಿರುವ ಚಂದ್ರಪ್ಪ ಕೆ.ಆರ್.ಪುರಂ ನಿವಾಸದಲ್ಲಿ ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಈ ಹಿಂದೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದಿದ್ದರು ಎಆರ್ ಓ ಚಂದ್ರಪ್ಪ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.
ಬೆಳಗಾವಿಬೆಳಗಾವಿಯಲ್ಲಿ ಪಂಚಾಯತ್ ರಾಜ್ ಇಲಾಖೆ ಎಇಇ M.S.ಬಿರಾದಾರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ದಾರೆ. ಇಲ್ಲಿನ ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟಮೆಂರ್ಟ್​ನಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿದ್ದು, ಲೋಕಾಯುಕ್ತ ಎಸ್​ಪಿ ಹನುಮಂತರಾಯ್ ನೇತೃತ್ವದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ.
ಚಿತ್ರದುರ್ಗಇಲ್ಲಿ ಭ್ರಷ್ಟಚಾರದ ಆರೋಪ ಹೊತ್ತಿರುವ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಸೂರ್ಯೋದಯಕ್ಕೂ ಮುನ್ನವೇ ವಾಹನಗಳಲ್ಲಿ ಪ್ರತ್ಯೇಕ ತಂಡವಾಗಿ ಆಗಮಿಸಿದ ಅಧಿಕಾರಿಗಳಿಂದ ಹಲವಾರು ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಚಿತ್ರದುರ್ಗದ ಲೋಕಾಯುಕ್ತ ಎಸ್ಪಿ ವಾಸುದೇವ ರಾವ್ ನೇತೃತ್ವದಲ್ಲಿ ಈ ಎರಡೂ ದಾಳಿ ನಡೆಸಲಾಗಿದೆ.
ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರಿಗೆ ಸೇರಿದ ಹಿರಿಯೂರು ನಗರದ ಚಂದ್ರಾ ಲೇಔಟ್ ನಲ್ಲಿರುವ ಮನೆಗೆ ಒಂದು ತಂಡ, ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ ಗೆ ಎರಡನೇ ತಂಡ ಹೋಗಿದೆ. ಅಷ್ಟೇ ಅಲ್ಲ, ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.
ಹಾಸನಹಾಸನದಲ್ಲಿ ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ಎಚ್ ಇ.ನಾರಾಯಣ ಎಂಬುವವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ತಿರುಮಲೇಶ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದಲ್ಲಿ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ಅವರ ನಿವಾಸ ಹಾಗೂ ಗೊರೂರಿನಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಹಾವೇರಿಹಾವೇರಿ ಆರ್ ಎಫ್ ಒ ಪರಮೇಶಪ್ಪ ಪೇರಲನವರ್ ಹಾಗೂ ನ್ಯಾಮತಿ ಆರ್ ಎಫ್ಒ ಮಾಲತೇಶ್​ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಏಕಕಾಲಕ್ಕೆ 9 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಶಿವಾಜಿನಗರ, ದಾನೇಶ್ವರಿ ಪಾರ್ಕ್, ದಾನಮ್ಮ ದೇವಿ ದೇವಸ್ಥಾನ ಬಳಿ ಇರುವ ಮನೆಗಳಲ್ಲಿ ಶೋಧ ನಡೆಸಿದ್ದಾರೆ.
ಕಲಬುರಗಿಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಮತ್ತು ದೇವದುರ್ಗದ ಕೆಬಿಜೆಎನ್ ಎಲ್ ಇಇ ತಿಪ್ಪಣ್ಣ ಅನ್ನದಾನಿ ಮನೆಗಳ ಮೇಲೆ ದಾಳಿಯಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆಯ ಆರೋಪ ಹಿನ್ನಲೆ ಲೋಕಾಯುಕ್ತ ಎಸ್ಪಿ ಎಸ್.ಎಸ್.ಕರ್ನೂಲ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಭ್ರಷ್ಟರಿಗೆ ಬೆಳಂಬೆಳ್ಳಗೆ ಶಾಕ್​ ನೀಡಿದ ಲೋಕಾಯುಕ್ತ; ರಾಜ್ಯದ ಹಲವೆಡೆ ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
