ಬೆಂಗಳೂರು:ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ‌ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರಿಗೆ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ವಿರೂಪಾಕ್ಷಪ್ಪ ಅವರು ಲಂಚ ಕೇಳಿರುವ ಬಗ್ಗೆ ಯಾವುದೇ ಆಡಿಯೋ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಸಾಕ್ಷ್ಯ ಒದಗಿಸುವವರೆಗೂ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ.
ಇದನ್ನೂ ಓದಿ:ಹಬ್ಬಕ್ಕೆಂದು ಅಕ್ಕನ ಮನೆಗೆ ಬಂದಿದ್ದ ಗೃಹಿಣಿ ದುರಂತ ಅಂತ್ಯ: ಭಗ್ನ ಪ್ರೇಮಿಯಿಂದಲೇ ಘೋರ ಕೃತ್ಯ
5 ಲಕ್ಷ ರೂ. ಬಾಂಡ್ ಇಬ್ಬರಿಂದ ಶ್ಯೂರಿಟಿ ಪಡೆದು ನ್ಯಾಯಮೂರ್ತಿ ಕೆ. ನಟರಾಜನ್​ ಅವರು ಆದೇಶ ಹೊರಡಿಸಿದ್ದಾರೆ. ಇಷ್ಟೇ ಅಲ್ಲದೆ, ಆದೇಶ ತಲುಪಿದ 48 ಗಂಟೆ ಒಳಗೆ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್​ಗೆ ಸಂಬಂಧಿಸಿದ ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಶಾಂತ್ ಮಾಡಾಳ್ ಮನೆಯಲ್ಲಿ 6 ಕೋಟಿ ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ (ಮಾ. 02) ತಡರಾತ್ರಿ ವಶಪಡಿಸಿಕೊಂಡಿದ್ದಾರೆ. ಕೆಎಸ್​ಡಿಎಲ್ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಅವರನ್ನು 40 ಲಕ್ಷ ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಇನ್ನೂ ಒಟ್ಟು 2.02 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು.
ಬಳಿಕ ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆಯ ಮೇಲೆ ದಾಳಿಮಾಡಿದ್ದ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು. ಗುರುವಾರ ಸಂಜೆ ಖಾಸಗಿ ಕಚೇರಿಯಲ್ಲಿ 2.42 ಕೋಟಿ ಮತ್ತು ಮಧ್ಯರಾತ್ರಿ ಡಾಲಸ್೯ ಕಾಲನಿಯ ಪ್ರಶಾಂತ್ ನಿವಾಸದಲ್ಲಿ 6 ಕೋಟಿ ಸೇರಿ ಒಟ್ಟಾರೆ 8.42 ಕೋಟಿ ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಮರು ಸ್ಥಾಪನೆಯಾದ ಮೇಲೆ ಲೋಕಾ ಪೊಲೀಸರು ಭೇಟೆಯಾಡಿರುವ ದೊಡ್ಡ ಮೊತ್ತದ ಪ್ರಕರಣ ಇದಾಗಿದ್ದು, ಈ ಪ್ರಕರಣ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಈ ಪ್ರಕರಣದ ಬಳಿಕ ವಿರೂಪಾಕ್ಷಪ್ಪ ಅವರು ಕೆಎಸ್​ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ನಾಪತ್ತೆಯಾಗಿದ್ದರು. ನಂತರ ಜಾಮೀನಿಗಾಗಿ ತಮ್ಮ ಪರ ವಕೀಲರಿಂದ ಅರ್ಜಿ ಸಲ್ಲಿಸಿದ್ದರು. ಇದೀಗ ಜಾಮೀನು ಮಂಜೂರಾಗಿದ್ದು, ಬಂಧನ ಭೀತಿಯಿಂದ ತಾತ್ಕಾಲಿಕ ರಿಲೀಫ್​ ಸಿಕ್ಕಿದೆ. (ದಿಗ್ವಿಜಯ ನ್ಯೂಸ್​)
ಸ್ನೇಹಿತನ ತಲೆ, ಖಾಸಗಿ ಅಂಗ ಕತ್ತರಿಸಿ, ಹೃದಯ ಕಿತ್ತು ಮೃತದೇಹ ತೋರಿಸಲು ಗರ್ಲ್​ಫ್ರೆಂಡ್​ ಕರೆದೊಯ್ದ ಯುವಕ!

ಹಿಂದೆ ಸರಿಯೋ ಮಾತೇ ಇಲ್ಲ… ಯಶ್​ ಅಭಿಮಾನಿಗಳ ಆಕ್ರೋಶದ ಬೆಂಕಿಗೆ ತುಪ್ಪ ಸುರಿದ ವೆಂಕಟೇಶ್​ ಹೇಳಿಕೆ

ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
