ಬೆಂಗಳೂರು:ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರಿಸಿರುವ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಗೆ ಇನ್ನಷ್ಟು ಚುರುಕು ನೀಡಿದ್ದಾರೆ. ಇಂದು (ಜುಲೈ 11) ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಏಕಕಾಲದಲ್ಲಿ 56 ಕಡೆ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಬೆಳಗಿನ ಜಾವ ಸವಿ ನಿದ್ರೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯಕ್ತ ಪೊಲೀಸರು ದುಸ್ವಪ್ನವಾಗಿ ಎಂಟ್ರಿ ಕೊಟ್ಟಿದ್ದಾರೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಈ ದಾಳಿ ಮಾಡಿದ್ದಾರೆ. ಸದ್ಯ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಕೋಲಾರ ತಹಶೀಲ್ದಾರ್​ ವಿಜಣ್ಣ, ಹಾಸನದಲ್ಲಿ ಗ್ರೇಡ್‌-1 ಕಾರ್ಯದರ್ಶಿ ಜಗದೀಶ್‌, ದಾವಣಗೆರೆ ಇಇ ಡಿ.ಹೆಚ್‌ ಉಮೇಶ್. ಹಾಗೂ ಎಎಇಇ ಪ್ರಭಾಕರ್ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಜಿಲ್ಲೆಯ 3 ಕಡೆ ಮತ್ತು ಮೈಸೂರಿನ 2 ಕಡೆಗಳಲ್ಲಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಈ ದಾಳಿಯಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಮನಾರ್ಹ ಸಂಗತಿ ಅಂದರೆ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಬುಧವಾರ (ಜುಲೈ 10) ಬೆಳಗ್ಗೆಯಷ್ಟೇ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.
ಟ್ರೈನಿ IAS ಅಧಿಕಾರಿಯ ಓವರ್​ ಆ್ಯಕ್ಷನ್​ಗೆ ಬೇಸತ್ತ ರಾಜ್ಯ ಸರ್ಕಾರ: ಈಕೆಯ ಬೇಡಿಕೆ ಕೇಳಿ ಸರ್ಕಾರವೇ ಸುಸ್ತು!

ಜನಸಂಖ್ಯೆ ಶಾಪವಲ್ಲ ಸಂಪತ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 5 =
Remember me
