ಬೆಂಗಳೂರು:ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಗೆಲುವಿನ ಗುಂಗಲ್ಲೇ ಲೋಕಸಭೆ ಎಲೆಕ್ಷನ್​ಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್​ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗಲು ಸಜ್ಜಾಗಿದೆ. ಆದರೆ, ಪ್ರತಿಕ್ಷೇತ್ರಕ್ಕೂ ಅಭ್ಯರ್ಥಿಗಳ ಆಯ್ಕೆ ಈಗ ಕಾಂಗ್ರೆಸ್​ ಪಾಲಿಗೆ ದೊಡ್ಡ ಕಗ್ಗಂಟಾಗಿದೆ ಪರಿಣಮಿಸಿದೆ.
ಜನವರಿ ಅಂತ್ಯ ಅಥವಾ ಫೆಬ್ರವರಿ ಮಧ್ಯವಾರದಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳ ಅಂತಿಮವಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಈಗ ಕೇಳಿಬಂದಿರುವ ಮಾಹಿತಿ ಪ್ರಕಾರ ಕಾಂಗ್ರೆಸ್​ ಪಕ್ಷ ಪ್ರತಿ ಕ್ಷೇತ್ರಕ್ಕೂ ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ತೊಡಗಿದೆ ಎಂದು ತಿಳಿದು ಬಂದಿದೆ. ಏಕೆಂದರೆ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳ ಕೊರತೆ ಎದುರಿಸುತ್ತಿದೆ ಎಂದು ವರದಿಯಾಗಿದೆ.
ಸುದ್ದಿ ಮೂಲಗಳ ಪ್ರಕಾರ ಕಾಂಗ್ರೆಸ್​ ಪಕ್ಷ ಚಿಕ್ಕೋಡಿ, ಬೆಳಗಾವಿ, ವಿಜಯಪುರ, ರಾಯಚೂರು, ಬೀದರ್​, ಕೊಪ್ಪಳ, ಧಾರವಾಡ, ದಾವಣಗೆರೆ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆಯನ್ನು ಎದುರಿಸುತ್ತಿದೆ.
ಇದನ್ನೂ ಓದಿ:ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಿಸಿದ ಸರ್ಕಾರ; 34 ಶಾಸಕರಿಗೆ ಅವಕಾಶ
ಇನ್ನು ಕಾಂಗ್ರೆಸ್​ ಸರ್ಕಾರದ ಬಹುತೇಕ ಸಚಿವರು ಲೋಕಸಭೆ ಚುನಾವಣೆಯಲ್ಲಿ ಸ್ಫರ್ಧಿಸಲು ಹಿಂದೇಟು ಹಾಕುತ್ತಿದ್ದು, ತಮ್ಮ ಬದಲಾಗಿ ಸಂಬಂಧಿಗಳಿಗೆ ಟಿಕೆಟ್​ ಕೊಡಿಸುವುದಕ್ಕೆ ಯತ್ನಿಸುತ್ತಿದ್ದಾರೆ. ಅದಕ್ಕೆ ಪೂರಕವೆಂಬಂತೆ ಸಚಿವರ ಸಂಬಂಧಿಗಳು ಈಗಾಗಲೇ ಕ್ಷೇತ್ರಗಳಲ್ಲಿ ಸುತ್ತಾಟ ಆರಂಭಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟು ಕಾಂಗ್ರೆಸ್​ ಪಾಲಿಗೆ ಯಾವ ರೀತಿ ಪರಿಣಮಿಸಲಿದೆ ಎಂದು ಕಾದು ನೋಡಬೇಕಿದೆ.
ಇತ್ತ ಬಿಜೆಪಿ ಹಾಗೂ ಜೆಡಿಎಸ್​ನಲ್ಲೂ ಪರಿಸ್ಥಿತ ಭಿನ್ನವಾಗಿಲ್ಲ ಎಂದು ಹೇಳಬಹುದು. ಏಕೆಂದರೆ ಉಭಯ ಪಕಷ್ಗಳು ಈಗಾಗಲೇ ಮೈತ್ರಿ ಘೋಷಿಸಿದ್ದು, ಮಾತುಕತೆಯ ಪ್ರಕಾರ ಮಿತ್ರಪಕ್ಷ ಜೆಡಿಎಸ್​ಗೆ ಬಿಜೆಪಿ 4-5 ಸ್ಥಾನಗಳನ್ನು ಬಿಟ್ಟುಕೊಡುವ ಅನಿವಾರ್ಯತೆ ಎದುರಾಗಿದೆ. ಅದರಂತೆ ಮಂಡ್ಯ, ಬೆಂಗಳೂರು ಗ್ರಾಮಾಂತರ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ರಾಯಚೂರು ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟುಕೊಡುವ ಅನಿವಾರ್ಯತೆ ಈಗ ಬಿಜೆಪಿಗೆ ಎದುರಾಗಿದೆ.
ಜೆಡಿಎಸ್​ ಕೇಳಿರುವ ಕ್ಷೇತ್ರಗಳಲ್ಲಿ ಕೆಲವು ಬಿಜೆಪಿ ನಾಯಕರು ಅಪಸ್ವರ ತೆಗೆದಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತಗೊಂಡ ಅಭ್ಯರ್ಥಿಗಳು ಲೋಕ ಸಮರಕ್ಕೆ ತಯಾರಿ ನಡೆಸುತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬದಲಾಯಿಸುತ್ತದೆ ಎಂಬ ಸುದ್ದಿ ವ್ಯಾಪಕವಾಗಿ ಕೇಳಿ ಬರುತ್ತಿದ್ದು, ಚುನಾವಣೆಯಲ್ಲಿ ಸ್ಫರ್ಧಿಸಲು ಆಕಾಂಕ್ಷಿಗಳ ದಂಡೇ ಸಜ್ಜಾಗಿ ನಿಂತಿದೆ. ಈ ಸವಾಲನ್ನು ಬಿಜೆಪಿ ಹಾಗೂ ಜೆಡಿಎಸ್​ ನಾಯಕರು ಹೇಗೆ ಎದುರಿಸಲಿದ್ದಾರೆ ಎಂದು ಕಾದು ನೋಡಬೇಕಿದೆ.

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eight + 13 =
Remember me
