
ಬೆಂಗಳೂರು:ಸಂಸತ್ ಅಧಿವೇಶನ ನಡೆಯುವ ಸಂದರ್ಭದಲ್ಲಿಯೇ ನಡೆದಿರುವ ದಾಳಿಯ ಹೊಣೆಯನ್ನು ಪ್ರಧಾನಮಂತ್ರಿ, ಗೃಹ ಸಚಿವ ಮತ್ತು ಸ್ಪೀಕರ್ ಅವರು ಹೊರಬೇಕು ಮತ್ತು ಕೂಡಲೆ ಅವರ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಒತ್ತಾಯಿಸಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಸಂಸತ್ ಭವನದ ಮೇಲೆ ದಾಳಿ ನಡೆದು 22 ವರ್ಷ ತುಂಬಿದ ಸಂದರ್ಭದಲ್ಲಿಯೇ ಈ ದಾಳಿ ಆಗಿರುವುದು ಆತಂಕಕಾರಿ ಸಂಗತಿ ಎಂದರು.ಸಂಸತ್ ಪ್ರಜಾಪ್ರಭುತ್ವದ ದೇಗುಲವಿದ್ದಂತೆ. ಅಲ್ಲಿಗೆ ಭದ್ರತೆ ಕೊಡಲಾಗದವರು ಇನ್ನು ದೇಶಕ್ಕೆ ಯಾವ ರೀತಿ ಭದ್ರತೆ ನೀಡಲು ಸಾಧ್ಯ? ಐದಾರು ಹಂತದಲ್ಲಿ ಭದ್ರತಾ ವ್ಯವಸ್ಥೆಯನ್ನು ದಾಟಿ ಸಂಸತ್ ಭವನದೊಳಗೆ ಬಂದು ಅಧಿವೇಶನದಲ್ಲಿ ದಾಳಿ ಮಾಡುತ್ತಾರೆ ಎಂದರೆ ದೊಡ್ಡ ಪ್ರಮಾಣದಲ್ಲಿ ಭದ್ರತಾ ಲೋಪ ಆಗಿದೆ. ಇದರ ಹೊಣೆಯನ್ನು ಪ್ರಧಾನಿಯೇ ಹೊರಬೇಕು ತಾನೆ? ಎಂದು ಕೇಳಿದರು.ಸಣ್ಣ ಕಾರಣಕ್ಕಾಗಿಯೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವ ಪ್ರಕರಣಗಳು ನಮ್ಮ ಮುಂದಿವೆ. ಇಷ್ಟು ದೊಡ್ಡ ವ್ಯವಸ್ಥೆಯ ಲೋಪವಾಗಿರುವ ಸಂದರ್ಭದಲ್ಲಿ ಅದನ್ನು ಹೇಗೆ ಸಹಿಸಿಕೊಳ್ಳಲು ಸಾಧ್ಯ? ಎಂದು ಪ್ರಶ್ನಿಸಿದರು.ಸಂಸದ ಪ್ರತಾಪಸಿಂಹ ಅವರ ಪಾತ್ರವೇನು?ಮಾಜಿ ವಿಧಾನಪರಿಷತ್ ಸದಸ್ಯ ಪಿ.ಆರ್.ರಮೇಶ್ ಮಾತನಾಡಿ, ಸಂಸತ್ತಿನ ದಾಳಿ ಮಾಡಿದವರ ಹೆಸರುಗಳು ಮತ್ತೊಂದು ಸಮುದಾಯದವರಾಗಿದ್ದರೆ ಬಿಜೆಪಿ ಇಷ್ಟೊತ್ತಿಗೆ ಏನೇನು ರದ್ದಾಂತ ಮಾಡುತಿತ್ತು? ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದರು.ಮಾಜಿ ಮೇಯರ್ ರಾಮಚಂದ್ರಪ್ಪ ಮಾತನಾಡಿ, ಜನರಿಗೆ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ, ಈಗ ತನ್ನ ವೈಲ್ಯ ಮುಚ್ಚಿಕೊಳ್ಳಲು ಮತ್ತು ಜನರ ಗಮನ ಬೇರೆಡೆಗೆ ಸೆಳೆಯಲು ದಾಳಿ ನಾಟಕವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 8 =
Remember me
