ಬೆಂಗಳೂರು:ಡ್ರಗ್​ ಮಾಫಿಯಾ ಪ್ರಕರಣದ 6ನೇ ಆರೋಪಿ ಆದಿತ್ಯ ಆಳ್ವಗೆ ಸಿಸಿಬಿ ಪೊಲೀಸರು ಲುಕ್​ಔಟ್​ ನೋಟಿಸ್​ ಜಾರಿ ಮಾಡಿದ್ದಾರೆ.
ಲುಕ್​ಔಟ್​ ನೋಟಿಸ್​ ಜಾರಿ ಮಾಡಿರುವ ಬಗ್ಗೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಖಚಿತ ಪಡಿಸಿದ್ದು, ಆದಿತ್ಯನಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ.
ಎಫ್​ಐಆರ್ ದಾಖಲಾದ ಬೆನ್ನಲ್ಲೇ ಆದಿತ್ಯ ತಲೆಮರಿಸಿಕೊಂಡಿದ್ದಾನೆ. ಈಗಾಗಲೇ ಹೆಬ್ಬಾಳದಲ್ಲಿರುವ ಆದಿತ್ಯ ಮನೆ ಹಾಗೂ ರೆಸಾರ್ಟ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಡ್ರಗ್ಸ್ ಪತ್ತೆಯಾಗಿದ್ದು, ರೆಸಾರ್ಟ್ ಮ್ಯಾನೇಜರ್ ರಾಮ್​ ದಾಸ್​ನನ್ನು ವಶಕ್ಕೆ ಪಡೆದಿದ್ದಾರೆ.
ಆದರೆ, ಸಿಸಿಬಿ ಪೊಲೀಸರಿಗೆ ಮಾತ್ರ ಆದಿತ್ಯ ಸುಳಿವು ಇನ್ನೂ ಸಿಕ್ಕಿಲ್ಲ. ಆತ ವಿದೇಶಕ್ಕೆ ಹೋಗಿ ತಲೆಮರಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಆದಿತ್ಯ ಆಳ್ವಾ ಪತ್ತೆಗೆ ಲುಕ್​ಔಟ್ ನೋಟಿಸ್​ ಜಾರಿ ಮಾಡಲಾಗಿದೆ.
ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ದಾಖಲಾಗಿರುವ ಡ್ರಗ್ಸ್​ ಮಾಫಿಯಾ ಕೇಸಿನಲ್ಲಿ ಈಗಾಗಲೇ ಸ್ಯಾಂಡಲ್​ವುಡ್​ನ ‘ಮಾದಕ’ ನಟಿ ರಾಗಿಣಿ ದ್ವಿವೇದಿ, ಬಹುಭಾಷಾ ನಟಿ ಸಂಜನಾ ಗಲ್ರಾನಿ ಜತೆಗೆ ಹಲವು ಡ್ರಗ್ಸ್​ ಪೆಡ್ಲರ್​ಗಳು ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದಾರೆ.
ಆದರೆ, ಆದಿತ್ಯ ಆಳ್ವ ಮಾತ್ರ ಸಿಸಿಬಿ ಪೊಲೀಸರ ಕೈಗೆ ಸಿಗದೆ ಎಸ್ಕೇಪ್​ ಆಗಿದ್ದಾನೆ. ನಟಿಮಣಿಯರಿಬ್ಬರು ಸೇರಿ ಹಲವು ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈತ ಜಾಮೀನು ಅರ್ಜಿ ಸಲ್ಲಿಸುವುದನ್ನು ಬಿಟ್ಟು, ತನ್ನ ವಿರುದ್ಧದ FIR ರದ್ದು ಮಾಡುವಂತೆ ಎಂದು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾನೆ.
ಜಾಮೀನು ಕೇಳೋದು ಬಿಟ್ಟು, ತನ್ನ ವಿರುದ್ಧದ ಕೇಸ್​ ಅನ್ನೇ ರದ್ದು ಮಾಡಿ ಎಂದ ಆದಿತ್ಯ ಆಳ್ವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 1 =
Remember me
