ಬೆಂಗಳೂರು:ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಲುಕ್​ ಔಟ್​ ನೋಟಿಸ್​ ಜಾರಿ ಮಾಡಿದೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಂಸದ ಪ್ರಜ್ವಲ್​ ರೇವಣ್ಣ ಹಾಗೂ ಶಾಸಕ ಎಚ್.ಡಿ. ರೇವಣ್ಣಗೆ ವಿಶೇಷ ತನಿಖಾ ತಂಡ ನೋಟಿಸ್​ ಜಾರಿ ಮಾಡಿತ್ತು. ನೋಟಿಸ್​ಗೆ ತಮ್ಮ ವಕೀಲರ ಮೂಲಕ ಉತ್ತರಿಸಿದ್ದ ಪ್ರಜ್ವಲ್​ 7 ದಿನಗಳ ಕಾಲಾವಕಾಶ ಕೋರಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಎಸ್​​ಐಟಿ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ.
ಪ್ರಜ್ವಲ್​ ರೇವಣ್ಣ ಎಲ್ಲೇ ಕಂಡರೂ ಕೂಡಲೇ ವಶಕ್ಕೆ ಪಡೆಯುವಂತೆ ನೋಟಿಸ್​ನಲ್ಲಿ ಸೂಚಿಸಲಾಗಿದ್ದು, ವಿಶ್ವದ ಎಲ್ಲಾ ಏರ್​ಪೋರ್ಟ್​ಗಳಿಗೂ ಲುಕ್​ಔಟ್​ ನೋಟಿಸ್​ ಜಾರಿ ಮಾಡಲಾಗಿದ್ದು, ವಿಶೇಷ ತನಿಖಾ ದಳ ಇಂಟರ್​ಪೋಲ್​ನ ಸಹಾಯ ಕೋರಿರುವುದಾಗಿ ವರದಿಯಾಗಿದೆ. ಮೇ 15 ಅಥವಾ 16ರಂದು ಪ್ರಜ್ವಲ್​ ರೇವಣ್ಣ ಭಾರತಕ್ಕೆ ವಾಪಸ್​ ಆಗಬಹುದು ಎಂದು ಹೇಳಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − two =
Remember me
