ಬೆಂಗಳೂರು:ಬೆಂಗಳೂರು: ಪಾಲಕರ ಜೊತೆ ಸೇರಿ ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪದ ಮೇಲೆ ಅನುಭವ ಸಿನಿಮಾ ಖ್ಯಾತಿಯ ಹಿರಿಯ ನಟಿ ಅಭಿನಯಾ ಅವರಿಗೆ ಹೈಕೋರ್ಟ್​ನಿಂದ ಎರಡು ವರ್ಷ ಜೈಲು ಶಿಕ್ಷೆ ಪ್ರಕಟವಾಗಿದ್ದು ಎಲ್ಲರಿಗೂ ತಿಳಿದ ವಿಚಾರ. ಇದೀಗ ಪೊಲೀಸರಿಂದ ತಲೆ ಮರೆಸಿಕೊಂಡು ಓಡಾಡುತ್ತಿರುವ ನಟಿ ಅಭಿನಯಾ, ತಾಯಿ ಸರೋಜಮ್ಮ ಹಾಗೂ ಸಹೋದರ ಚೆಲುವರಾಜು, ವಿರುದ್ಧ ಚಂದ್ರಾ ಲೇಔಟ್​ ಪೊಲೀಸರು ಲುಕ್​ ಔಟ್​ ನೋಡೀಸನ್ನು ಜಾರಿ ಮಾಡಿದ್ದಾರೆ.
ಘಟನೆ ಹಿನ್ನೆಲೆ ಏನು?2002ರಲ್ಲಿ ಲಕ್ಷ್ಮೀದೇವಿ ಎಂಬುವವರು ಅಭಿನಯಾ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಅವರನ್ನು ಲಕ್ಷ್ಮೀದೇವಿ ಮದುವೆಯಾಗಿದ್ದರು. ಮದುವೆ ವೇಳೆ ವರಕ್ಷಿಣೆ ಪಡೆದಿದ್ದಲ್ಲದೆ, ನಂತರವೂ ಪದೇಪದೆ ಹಣ ತರುವಂತೆ ಕಿರುಕುಳ ನೀಡುತ್ತಿದ್ದರು. ವಿವಾಹದ ಸಮಯದಲ್ಲಿ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣ ಪಡೆದಿದ್ದರು. ಇದಾದ ನಂತರವೂ 1 ಲಕ್ಷ ರೂ.ಗೆ ಬೇಡಿಕೆ ಇಟ್ಟು 20 ಸಾವಿರ ಪಡೆದ ನಂತರವೂ ಕಿರುಕುಳ ಕೊಡುತ್ತಿದ್ದರು. ಹಣ ಕೊಟ್ಟರೂ ಸಹ ನನ್ನನ್ನು ಪಾಲಕರ ಮನೆಯಲ್ಲಿ ಬಿಟ್ಟಿದ್ದರು ಎಂದು ದೂರಿನಲ್ಲಿ ಲಕ್ಷ್ಮೀದೇವಿ ಆರೋಪಗಳ ಸುರಿಮಳೆಗೈದಿದ್ದರು.\

ದೋಷಿಗಳೆಂದು ತೀರ್ಮಾನಿಸಿದ್ದ ಎಸಿಎಂಎಂ ಕೋರ್ಟ್:ಪ್ರಕರಣದ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್, ಶ್ರೀನಿವಾಸ್ ಮತ್ತವರ ಕುಟುಂಬ ಸದಸ್ಯರನ್ನು ದೋಷಿಗಳೆಂದು ತೀರ್ಮಾನಿಸಿ, ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಆರೋಪಿಗಳೆಲ್ಲರಿಗೂ ತಲಾ 2 ವರ್ಷ ಜೈಲು ಶಿಕ್ಷೆ ಹಾಗೂ 1 ಸಾವಿರ ರೂ. ದಂಡ ವಿಧಿಸಿತ್ತು. ಜತೆಗೆ, ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಜಯಮ್ಮ ಅವರಿಗೆ 2 ವರ್ಷ ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ಮತ್ತು ಸೆಕ್ಷನ್ 4ರ ಅಡಿಯಲ್ಲಿ 6 ತಿಂಗಳು ಶಿಕ್ಷೆ ಹಾಗೂ 1 ಸಾವಿರ ರೂ. ದಂಡ ವಿಧಿಸಿ 2010ರ ಜ.5ರಂದು ಆದೇಶಿಸಿತ್ತು.
ಇದನ್ನು ಪ್ರಶ್ನಿಸಿ ಆರೋಪಿಗಳೆಲ್ಲರೂ ಸೆಷನ್ಸ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಮತ್ತೊಂದೆಡೆ, ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 3ರ ಅಡಿ ವಿಧಿಸಲಾಗಿರುವ ಶಿಕ್ಷೆಯ ಪ್ರಮಾಣ ಹೆಚ್ಚಿಸುವಂತೆ ಕೋರಿ ಸರ್ಕಾರ ಸಹ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ್ದ ಸೆಷನ್ಸ್ ಕೋರ್ಟ್, ಆರೋಪಿಗಳ ಮೇಲ್ಮನವಿ ಮಾನ್ಯ ಮಾಡಿ, ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿತ್ತಲ್ಲದೆ, ಶಿಕ್ಷೆಯ ಪ್ರಮಾಣ ಹೆಚ್ಚಳಕ್ಕೆ ಕೋರಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿ, 2012ರ ಮಾ.9ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಹಾಗೂ ದೂರುದಾರೆ ಲಕ್ಷ್ಮೀದೇವಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.‘
ಇದಾದ ಮೇಲೂ ಅವರು ದೋಷಿ ಎಂದು ನಿರ್ಧರಿಸಿದ್ದ ಕೋರ್ಟ್​, ಶಿಕ್ಷೆ ವಿಧಿಸಿತ್ತು. ಆದರೆ ಜೈಲು ಶಿಕ್ಷೆಯಿಂದ ಪಾರಾಗಲು ನಟಿ ಅಭಿನಯಾ ಹಾಗೂ ಆಕೆಯ ಕುಟುಂಬಿಕರು ತಲೆಮರೆಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಪ್ಪಿಸಿಕೊಂಡಿರುವ ನಟಿ ಅಭಿನಯ ಹಾಗೂ ಆಕೆಯ ಕುಟುಂಬಸ್ಥರ ಪತ್ತೆಗೆ ಚಂದ್ರಾ ಲೇಔಟ್​ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಸದ್ಯ ಪೊಲೀಸರ ಕೈಗೆ ಸಿಗದೇ, ನಟಿ ಅಭಿನಯ, ಅವರ ತಾಯಿ ಹಾಗೂ ಸೋದರ ತಲೆಮರೆಸಿಕೊಂಡಿದ್ದಾರೆ. ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ನಟಿ ಅಭಿನಯ, ಸೋದರ ಹಾಗೂ ತಾಯಿ ಹೈಕೋರ್ಟ್ ಗೆ ಹೋಗಿದ್ದರು. ಆದರೆ ಹೈಕೋರ್ಟ್ ಕೂಡ ಸೆಷನ್ಸ್ ಕೋರ್ಟ್ ಆದೇಶವನ್ನ ಎತ್ತಿ ಹಿಡಿದಿತ್ತು. ಹೀಗಾಗಿ ಆರೋಪಿಗಳನ್ನು ಬಂಧಿಸಿ ಕೋರ್ಟ್​ಗೆ ಪೊಲೀಸರು ಹಾಜರು ಪಡಿಸಿಬೇಕಿತ್ತು.
ಆದರೆ ಪೊಲೀಸರ ಕೈಗೆ ಸಿಗದೇ ನಟಿ ಅಭಿನಯ, ತಾಯಿ ಜಯಮ್ಮ ಹಾಗೂ ಸೋದರ ಚೆಲುವರಾಜು ತಲೆಮರೆಸಿಕೊಂಡಿದ್ದಾರೆ. ಸದ್ಯ ಆರೋಪಿಗಳ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದ್ದು ಸಾರ್ವಜನಿಕರಿಗೆ ಆರೋಪಿಗಳ ಬಗ್ಗೆ ಮಾಹಿತಿ ಸಿಕ್ಕಿದರೆ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
