ಅಂಕೋಲ:ಅಪಘಾತವಾದರೆ ಜನರು ಸಾಮಾನ್ಯವಾಗಿ ಬೇಸರ ಪಡುತ್ತಾರೆ. ಆದರೆ ಇಲ್ಲೊಂದು ಕಡೆ ಲಾರಿಯೇ ಮಗುಚಿ ಬಿದ್ದರೂ ಒಂದಷ್ಟು ಮಂದಿ ಖುಷಿಯಾಗಿದ್ದಲ್ಲದೆ ಪಾರ್ಟಿಯನ್ನೂ ಮಾಡಿದ್ದಾರೆ. ಏಕೆಂದರೆ ಪಲ್ಟಿಯಾಗಿದ್ದು ಮದ್ಯ ಸಾಗಿಸುತ್ತಿದ್ದ ಲಾರಿ.
ಹೌದು.. ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯೊಂದು ಅಪಘಾತಕ್ಕೀಡಾಗಿ ಪಲ್ಟಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅಡ್ಲೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಈ ಲಾರಿಯಲ್ಲಿ ಗೋವಾದಿಂದ ಮದ್ಯವನ್ನು ತುಂಬಿಕೊಂಡು ಹುಬ್ಬಳ್ಳಿಗೆ ಅಕ್ರಮವಾಗಿ ಸಾಗಿಸಲಾಗುತ್ತಿತ್ತು.
ಇದನ್ನೂ ಓದಿ:ಮೈಮೇಲೇ ಲಾರಿ ಚಲಿಸಿ 3 ವರ್ಷದ ಮಗು ಸ್ಥಳದಲ್ಲೇ ಸಾವು; ಪುತ್ರಿಯೊಂದಿಗೆ ದಂಪತಿ ಸಾಗುತ್ತಿದ್ದ ಬೈಕ್​ಗೆ ಲಾರಿ ಡಿಕ್ಕಿ
ಆದರೆ ವಿವಿಧ ಬ್ರ್ಯಾಂಡ್​ನ ಮದ್ಯದ ಬಾಕ್ಸ್​ಗಳನ್ನು ತುಂಬಿಕೊಂಡು ಹೊರಟಿದ್ದ ಈ ಲಾರಿ ಅಪಘಾತಕ್ಕೀಡಾಗಿ ಪಲ್ಟಿಯಾಗಿದ್ದರಿಂದ, ಅದರಲ್ಲಿ ತುಂಬಿದ್ದ ಮದ್ಯದ ಬಾಕ್ಸ್​ಗಳು ರಸ್ತೆಗೆ ಬಿದ್ದು ಚೆಲ್ಲಾಪಿಲ್ಲಿಯಾಗಿವೆ. ಈ ಸಂದರ್ಭದಲ್ಲಿ ಇಲ್ಲಿ ಜಮಾಯಿಸಿದ ಕೆಲವರು ಮದ್ಯದ ಬಾಟಲಿಗಳ ಬಾಕ್ಸ್​ಗಳನ್ನೇ ಹೊತ್ತೊಯ್ದಿದ್ದಾರೆ. ಅಂಕೋಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊರಗಜ್ಜನ ಕ್ಷೇತ್ರದಲ್ಲಿ ಮೂತ್ರ ವಿಸರ್ಜಿಸಿದವ ರಕ್ತಕಾರಿ ಸತ್ತ ಬೆನ್ನಲ್ಲೇ ಕೊಂಡಾಣದಲ್ಲಿ ಮತ್ತೊಂದು ಹೀನ ಕೃತ್ಯ ಬಯಲು

ಖಾಸಗಿ ಬಸ್​ ಪಲ್ಟಿ, ಒಬ್ಬನ ಸ್ಥಿತಿ ಗಂಭೀರ; ಮದುವೆಗೆ ಹೊರಟಿದ್ದ 15ಕ್ಕೂ ಅಧಿಕ ಮಂದಿಗೆ ಗಾಯ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
