ಚಿತ್ರದುರ್ಗ:ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಗೆ ನುಗ್ಗಿದ ಪರಿಣಾಮ ಮಹಿಳೆಯೊಬ್ಬಳು ಸಾವಿಗೀಡಾಗಿರುವ ಘಟನೆ ನಡೆದಿದೆ.
ರುದ್ರಮ್ಮ (62) ಮೃತ ದುರ್ದೈವಿ. ಲಾರಿ ಮನೆಗೆ ನುಗ್ಗಿದ ರಭಸಕ್ಕೆ ಗೋಡೆ ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮದಲ್ಲಿ ಘಟನೆ ನಡೆದಿದೆ.
ತಡರಾತ್ರಿ ಹೊಸದುರ್ಗ ಕಡೆಯಿಂದ ಬಂದ ಲಾರಿ ರುದ್ರಮ್ಮನ ಮನೆಗೆ ಡಿಕ್ಕಿ ಹೊಡೆದು ನುಗ್ಗಿದೆ. ಇದರ ಬೆನ್ನಲ್ಲೇ ಚಾಲಕ ಸ್ಥಳದಲ್ಲಿಯೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಹೊಸದುರ್ಗ ಠಾಣಾ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಯುಪಿಎಸ್ಸಿ ಆಕಾಂಕ್ಷಿಗಳ ಪ್ರಶ್ನೆಗಳಿಗೆ ವಿಜಯವಾಣಿ ಫೋನ್​ ಇನ್​ನಲ್ಲಿ ಟಾಪರ್​ಗಳು ನೀಡಿದ ಉತ್ತರಗಳಿವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 18 =
Remember me
