ಉಪ್ಪಿನಂಗಡಿ:ಕಡಬ ತಾಲೂಕಿನ ಮಣ್ಣಗುಂಡಿ ಎಂಬಲ್ಲಿ ಬುಧವಾರ ತಡರಾತ್ರಿ ಬಸ್​ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಹಗಳು ಬೆಂಕಿಯಲ್ಲಿ ಹೊತ್ತಿ ಉರಿದಿದ್ದು, ಲಾರಿ ಚಾಲಕ ಸಜೀವ ದಹನ ಆಗಿದ್ದಾನೆ.
ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ಕ್ಯಾಂಟರ್ (ಕೆಎ 51 AF 6308)ನ ಚಾಲಕ ಮೈಸೂರಿನ ಸಂತೋಷ್(‌25) ಮೃತ ದುರ್ದೈವಿ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಕ್ಯಾಂಟರ್ ಗೂಡ್ಸ್​ ಲಾರಿ ಹಾಗೂ ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌(KA 20 AA 8078) ಮುಖಾಮುಖಿ ಡಿಕ್ಕಿಯಾಗಿವೆ. ಬಸ್​ನಲ್ಲಿ ತುಳು ಚಿತ್ರದ ಖ್ಯಾತನಟಿ ನೀಮಾರೇ ಸಹ ಇದ್ದರು. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ತೀವ್ರತೆಗೆ ಎರಡೂ ವಾಹನಗಳಿಗೆ ಬೆಂಕಿ ಆವರಿಸಿದ್ದು, ಖಾಸಗಿ ಬಸ್‌ ಸಂಪೂರ್ಣ ಸುಟ್ಟು ಹೋಗಿದೆ. ಲಾರಿಯೂ ಸುಟ್ಟು ಕರಕಲಾಗಿದೆ. ಬೆಂಕಿ ತಗುಲಿದ ತಕ್ಷಣವೇ ಪ್ರಯಾಣಿಕರು ಹೊರಗೆ ಓಡಿಹೋಗಿದ್ದರಿಂದ ಹೆಚ್ಚಿನ ಅಪಾಯವಾಗಲಿಲ್ಲ. ಟ್ರಕ್‌ ಚಾಲಕ ಹೊರ ಬರಲಾರದೆ ಸ್ಥಳದಲ್ಲೇ ಲಾರಿಯಲ್ಲೇ ಸುಟ್ಟುಕರಕಲಾಗಿದ್ದಾನೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಬೆಂಕಿ ನಂದಿಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಸಹಜ ಸ್ಥಿತಿಗೆ ಬಂದಿದೆ.
ಬಸ್‌ ಚಾಲಕ ಮತ್ತು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೊಸ ಕಾರಿನ ಪೂಜೆಗೆಂದು ಧರ್ಮಸ್ಥಳಕ್ಕೆ ಹೊರಟಿದ್ದವರ ಬಾಳಲ್ಲಿ ದುರಂತ! ಇಬ್ಬರ ಸಾವು, 6 ಜನರ ಸ್ಥಿತಿ ಗಂಭೀರ

ಅಯ್ಯೋ, ಮಗಳೇ ಆ ಒಂದು ಮಾತಿಗೆ ಎಂಥ ಸಾವು ತಂದುಕೊಂಡವ್ವ…

ನರಹಂತಕ ಹುಲಿಯ ಅಂತ್ಯಸಂಸ್ಕಾರ ಮುಗಿದ ಬಳಿಕ ನಿಟ್ಟುಸಿರುಬಿಟ್ಟ ಜನರಿಗೆ ಬೆಳಂಬೆಳಗ್ಗೆ ಕಾದಿತ್ತು ಆಘಾತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 13 =
Remember me
