ಆನೇಕಲ್:ಚಲಿಸುತ್ತಿದ್ದ ಕಾರಿನ ಮೇಲೆ ಜಲ್ಲಿ ತುಂಬಿದ್ದ ಲಾರಿ ಮಗುಚಿ ಬಿದ್ದಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ತಮಿಳುನಾಡಿಗೆ ಸೇರಿದ ಕಾರು ಬೆಂಗಳೂರಿನತ್ತ ತೆರಳುತ್ತಿದ್ದು. ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಬಳಿ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಏಕಾಏಕಿ ಮುಗುಚಿ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ಜಲ್ಲಿ ಕಲ್ಲಿನಿಂದ ತುಂಬಿ ಕಾರಿನಲ್ಲಿದ್ದ ಜಗದೀಶ್ ಕುಮಾರ್ ಮತ್ತು ಪವನ್ ಕುಮಾರ್ ಕಾರಿನಲ್ಲಿಯೇ ಸಿಲುಕಿ ಕೊನೆಯುಸಿರೆಳೆದಿದ್ದಾರೆ. ಮೃತರು ತಮಿಳುನಾಡು ಮೂಲದವರು, ಬೆಂಗಳೂರಿನ ನಾಗರಬಾವಿಯಲ್ಲಿ ವಾಸವಿದ್ದರು.
ರಸ್ತೆಮಧ್ಯೆ ಕಾರಿನ ಮೇಲೆ ಜಲ್ಲಿಕಲ್ಲಿನ ರಾಶಿ ಬಿದ್ದಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು. ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಲಾರಿ ಪಲ್ಟಿ ಹೊಡೆದ ರಭಸಕ್ಕೆ ಎರ್ಟಿಗಾ ಕಾರು ನಜ್ಜುಗುಜ್ಜಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಟ್ರಾಫಿಕ್​ ಜಾಮ್​ ನಿಯಂತ್ರಿಸಿದರು. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಪತಿಯನ್ನ ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ! ಬೇಲ್​ ಮೇಲೆ ಹೊರ ಬಂದವಳಿಂದ ಮತ್ತೊಂದು ನೀಚ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + fourteen =
Remember me
