ದಾವಣಗೆರೆ:ಧಾರವಾಡ ಹೊರವಲಯದ ಇಟ್ಟಿಗಟ್ಟಿ ಬಳಿ ಶುಕ್ರವಾರ ಬೆಳ್ಳಂಬೆಳಗ್ಗೆ ಟೆಂಪೋ ಟ್ರಾವೆಲರ್​ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೇರಿದೆ.
ಮೃತರೆಲ್ಲರೂ ದಾವಣಗೆರೆ ಮೂಲದವರು. ದಾವಣಗೆರೆಯ ಸೇಂಟ್‌ ಪಾಲ್ಸ್‌ ಕಾನ್ವಂಟ್‌ ಶಾಲೆಯ ಹಳೇ ವಿದ್ಯಾರ್ಥಿಗಳಾದ ಇವರು ಇತ್ತೀಚಿಗೆ ನಡೆದ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದರು. ಹಲವು ವರ್ಷಗಳ ನಂತರ ಭೇಟಿಯಾಗಿದ್ದ ಬಾಲ್ಯ ಸ್ನೇಹಿತೆಯರು ಪಣಜಿಗೆ ಪ್ರವಾಸ ಹೊರಟಿದ್ದರು. ಟೆಂಪೋ ಟ್ರಾವೆಲರ್‌ನಲ್ಲಿ ಮುಂಜಾನೆ 3 ಗಂಟೆಗೆ ದಾವಣಗೆರೆ ಬಿಟ್ಟಿದ್ದರು.
ಧಾರವಾಡದ ಇಟ್ಟಿಗಟ್ಟಿ ಬೈಪಾಸ್‌ ಸಮೀಪ ಬೆಳಗ್ಗೆ 7.30ರ ವೇಳೆಗೆ ಯಮರೂಪಿಯಾಗಿ ಬಂದ ಮರಳು ಸಾಗಣೆ ಟಿಪ್ಪರ್‌ ಲಾರಿಯು ಟೆಂಪೋ ಟ್ರಾವೆಲ್ಲರ್​ಗೆ ಡಿಕ್ಕಿ ಹೊಡೆದಿದೆ. ಟೆಂಪೋ ಟ್ರಾವೆಲರ್‌ನಲ್ಲಿದ್ದ 16 ಮಹಿಳೆಯರ ಪೈಕಿ 10 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಇವರ ಜತೆಗೆ ಟಿಟಿ ಚಾಲಕನೂ ಸತ್ತಿದ್ದಾನೆ. ಉಳಿದವರ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಟೆಂಪೋ ಟ್ರಾವೆಲ್​ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತಪಟ್ಟ 11 ಜನರ ಪೈಕಿ 7 ಮೃತದೇಹಗಳನ್ನು ಪೊಲೀಸರು ಕಿಮ್ಸ್ ಶವಾಗಾರಕ್ಕೆ ರವಾನಿಸಿದ್ದಾರೆ. ಮೃತದೇಹಗಳು ಗುರುತು ಸಿಗದಂತಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಶವಾಗಾರದ ಬಳಿ ಮೃತರ ಸಂಬಂಧಿಕರು, ಸ್ನೇಹಿತರು ಹಾಗೂ ಪೊಲೀಸ್ ಆಯುಕ್ತ ಲಾಬುರಾಮ ಮೊಕ್ಕಾಂ ಹೂಡಿದ್ದಾರೆ. ಇನ್ನೂ ಕೆಲ ಸಂಬಂಧಿಕರು ದಾವಣಗೆರೆಯಿಂದ ಕಿಮ್ಸ್ ಹಾಗೂ ಧಾರವಾಡಕ್ಕೆ ಆಗಮಿಸುತ್ತಿದ್ದಾರೆ.
ಗೋವಾ ಪ್ರವಾಸಕ್ಕೆಂದು ಟಿಟಿ ವಾಹನ ಹತ್ತುತ್ತಿದ್ದಂತೆ ಬಾಲ್ಯ ಸ್ನೇಹಿತೆಯರೆಲ್ಲರೂ ಮೊಬೈಲ್​ನಲ್ಲಿ ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಂಡು ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ಹಾಕಿಕೊಂಡಿದ್ದರು. ಅವರು ಬದುಕಿದ್ದಾಗ ತೆಗೆದ ಕೊನೇ ಫೋಟೋ ಇದೇ… ಎನ್ನುತ್ತ ಕುಟುಂಬಸ್ಥರು ಗೋಳಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಈ ಒಂದು ನಿರ್ಧಾರವೇ ದುರಂತ ಸಾವಿಗೆ ಕಾರಣವಾಯ್ತಾ? ಮೃತರ ಸಂಬಂಧಿ ಗೋಳಾಟ

ಧಾರವಾಡದಲ್ಲಿ ಭೀಕರ ಅಪಘಾತಕ್ಕೆ 11 ಜನ ಬಲಿ! ಆ ಕ್ಷಣ ಕುರಿತು ಗಾಯಾಳು ಬಿಚ್ಚಿಟ್ಟ ಎಕ್ಸ್​ಕ್ಲೂಸಿವ್​ ಮಾಹಿತಿ ಇಲ್ಲಿದೆ

ಧಾರವಾಡದಲ್ಲಿ ಭೀಕರ ಅಪಘಾತ! 11ಕ್ಕೇರಿದ ಸಾವಿನ ಸಂಖ್ಯೆ, ಮಾಜಿ ಶಾಸಕರ ಸೊಸೆಯೂ ದುರ್ಮರಣ

ಲೈವ್​ನಲ್ಲೇ ವಿಷ ಕುಡಿದ ಅರ್ಚಕ! 3 ದಿನದ ಬಳಿಕ ಸೆಲ್ಫಿವಿಡಿಯೋ ವೈರಲ್​, ಡೆತ್​ನೋಟ್​ನಲ್ಲಿದೆ ಸ್ಫೋಟಕ ರಹಸ್ಯ

ತಾನೇ ಸಾಕಿದ್ದ ಹಸುಗೆ ಬಲಿಯಾದ ಬಾಲಕ! ಮುಗಿಲುಮುಟ್ಟಿದೆ ಕುಟುಂಬಸ್ಥರ ಆಕ್ರಂದನ

ಪ್ರೀತಿಸಿ ಮದ್ವೆ ಮಾಡಿಕೊಂಡಾಗ ಅಡ್ಡಿಯಾಗದ ಆ ಸಮಸ್ಯೆ ವರ್ಷದ ಬಳಿಕ ದೊಡ್ಡದಾಯ್ತೆ..? ಗಂಡನ ಮನೆ ಬಾಗಿಲಲ್ಲಿ ಕಣ್ಣೀರಿಟ್ಟ ಪತ್ನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + eighteen =
Remember me
