ಮಂಡ್ಯ:ಲಾರಿಯೊಂದು ಮೂರು ಎತ್ತಿನಗಾಡಿಗಳಿಗೆ ಡಿಕ್ಕಿ ಹೊಡೆದಿದ್ದು, ಐದು ಎತ್ತುಗಳು ಸ್ಥಳದಲ್ಲೇ ಸಾವಿಗೀಡಾಗಿವೆ. ಮತ್ತೊಂದೆಡೆ ಮೂವರು ರೈತರು ಮತ್ತು ಒಂದು ಎತ್ತಿಗೆ ಗಾಯಗಳಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಹದೇವಪುರದಲ್ಲಿ ಈ ಅಪಘಾತ ಸಂಭವಿಸಿದೆ. ನಾಗಮಂಗಲ ಕಡೆಯಿಂದ ತರಕಾರಿ ತುಂಬಿಕೊಂಡು ಬರುತ್ತಿದ್ದ ಲಾರಿ, ಚಾಮರಾಜನಗರ-ಜೇವರ್ಗಿ‌ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಎತ್ತಿನಗಾಡಿಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತವಾದ ತಕ್ಷಣ ಲಾರಿ ಚಾಲಕ ಪರಾರಿಯಾಗಿದ್ದಾನೆ.
ಈ ಅಪಘಾತದಲ್ಲಿ ಮೂವರು ರೈತರಿಗೆ ಮತ್ತು ಒಂದು ಎತ್ತಿಗೂ ಗಾಯಗಳಾಗಿವೆ. ಅಪಘಾತಕ್ಕೆ ಸಂಬಂಧಿಸಿದಂತೆ ರೈತರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಣಾಮವಾಗಿ ಕಿಲೋಮೀಟರ್​ಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿತ್ತು. ಪಾಂಡವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
ಚೌತಿ ಮೆರವಣಿಗೆ ವೇಳೆ ಮಸೀದಿ ಆವರಣಕ್ಕೆ ಬಣ್ಣ ಎರಚಿದ ಯೋಧ; ಸೈನಿಕನ ಬಂಧನ, ಪ್ರಕರಣ ದಾಖಲು..

ಮಗನ ಉದ್ಯೋಗಕ್ಕಾಗಿ ಸಂಸದೆಯ ಕಾಲಿಗೆ ಬಿದ್ದ ಮಹಿಳೆ; ಹೈಕೋರ್ಟ್ ತೀರ್ಪಿಗೂ ಬಗ್ಗದ ಆಡಳಿತ ಮಂಡಳಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
