ಉಡುಪಿ:ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಯಾಂಟ್ರೋ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆ ಗಂಭೀರವಾದರೂ ವಾಹನ ನಿಲ್ಲಿಸದೆ 2 ಕಿ.ಮೀ ದೂರ ಲಾರಿ ಚಾಲಕ ಕಾರನ್ನು ಎಳೆದೊಯ್ದ ದೃಶ್ಯ ಸ್ಥಳೀಯರೊಬ್ಬರ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:MB Patil & Lakshmi Hebbalkar Welcome Akhilesh Yadav | ಯುಪಿ ಮಾಜಿ ಸಿಎಂಗೆ ಸ್ವಾಗತ ಕೋರಿದ ಹೆಬ್ಬಾಳ್ಕರ್, ಎಂ.ಬಿ. ಪಾಟೀಲ್​ | BENGALURU
ಜುಲೈ 17ರ ಸೋಮವಾರ ಮಧ್ಯಾಹ್ನ ಉಡುಪಿ ಜಿಲ್ಲೆಯ ಪಡುಬಿದ್ರಿ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಿಪ್ಪರ್ ಲಾರಿಯ ಚಾಲಕ ಕಾರನ್ನು ಸುಮಾರು 2 ಕಿಲೋಮೀಟರ್ ದೂರದವರೆಗೂ ಎಳೆದುಕೊಂಡು ಹೋಗಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ದೃಶ್ಯ ಸೋಷಿಯಲ್​ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದೆ.
ಘಟನೆಯ ವಿವರ:ಟಿಪ್ಪರ್‌ನ ಬಂಪರ್‌ಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು 2 ಕಿಲೋಮೀಟರ್ ದೂರ ಟಿಪ್ಪರ್ ಎಳೆದೊಯ್ದಿರುವ ಘಟನೆ ಪಡುಬಿದ್ರಿಯಲ್ಲಿ ಸೋಮವಾರ ನಡೆದಿದ್ದು, ಕಾರನ್ನು ಎಳೆದೊಯ್ಯವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರು ಹಾಗೂ ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗುತ್ತಿದ್ದಂತೆ, ವಾಹನದ ವೇಗವನ್ನು ಟಿಪ್ಪರ್ ಚಾಲಕ ಹೆಚ್ಚಿಸಿದ್ದು, ಸಾರ್ವಜನಿಕರು ಎಳೆದಾಡಿ ಹೊಡೆಯಬಹುದು ಎಂಬ ಆತಂಕದಲ್ಲಿ ವೇಗವಾಗಿ ಚಾಲಕ ಟಿಪ್ಪರ್ ಓಡಿಸಿದ್ದಾನೆ.
ಇದನ್ನೂ ಓದಿ:ರಿಲೀಸ್​​ಗೂ ಮುನ್ನವೇ ದಾಖಲೆ ಸೃಷ್ಟಿಸಿದ ಪ್ರಭಾಸ್ ನಟನೆಯ ಸಲಾರ್!
ಟಿಪ್ಪರ್‌ನ ಹಿಂಬದಿಗೆ ಕಾರು ಸಿಲುಕಿರುವ ವಿಚಾರ ಚಾಲಕನಿಗೆ ಗೊತ್ತಿರಲಿಲ್ಲ. ಬಳಿಕ ಟಿಪ್ಪರನ್ನು ಹಿಂಬಾಲಿಸಿಕೊಂಡು ಬಂದು ಬೈದು ಸಾರ್ವಜನಿಕರು ನಿಲ್ಲಿಸಿದ್ದು, ಪಡುಬಿದ್ರಿ ಪೊಲೀಸರು ಟಿಪ್ಪರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯವಾಗಿದ್ದು, ಗಾಯಗಳನ್ನು ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.
WATCH: In a bizarre incident, the driver of a tipper truck drove the vehicle for about 2 kms dragging a car that got stuck beneath truck’s chassis after rear-ending it in Padubidri police limits of Udupi district on July 17, Monday afternoon.pic.twitter.com/eUv2XYuHS8
— Darshan Devaiah B P (@DarshanDevaiahB)July 17, 2023

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 10 =
Remember me
